ಕಾಸರಗೋಡು: ಮುಳಿಯಾರ್ ಪಮಚಾಯಿತಿಯ ಪೊವ್ವಲ್‍ನಲ್ಲಿ ಚಟುವಟಿಕೆ ನಡೆಸುತ್ತಿರುವ ಲಾಲ್ ಬಹದ್ದೂರ್ ಶಾಸ್ತ್ರಿ(ಎಲ್ ಬಿಎಸ್)ಇಂಜಿನಿಯರಿಂಗ್ ಕಾಲೇಜಿನ ಬಸ್ಸಿಗೆ ಗುತ್ತಿಗೆ ಆಧಾರದಲ್ಲಿ ಕ್ಲೀನರ್ ನೇಮಕಾತಿ ನಡೆಯಲಿದೆ. 7ನೇ ತರಗತಿ ಉತ್ತೀರ್ಣರಾಗದ ಮತ್ತು ಕೆಲಸದ ಅನುಭವ ಹೊಂದಿರುವ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ಮತ್ತು ಕೆಲಸದ ಅನುಭವವನ್ನು ಸಾಬೀತುಪಡಿಸುವ ಮೂಲ ಪ್ರಮಾಣಪತ್ರದೊಂದಿಗೆ ಆಗಸ್ಟ್ 4 ರಂದು ಬೆಳಗ್ಗೆ 10ಕ್ಕೆ ಕಾಲೇಜಿನಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬಹುದು. ಈ ಬಗ್ಗೆ ಮಾಹಿತಿಗಾಗಿ ದೂರವಾಣಿ ಸಂಖ್ಯೆ(04994 250290)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.