ಕಾಸರಗೋಡು: ರಾಮರಾಜ ಕ್ಷತ್ರಿಯ ಯಾನೆ ಕೋಟೆಯಾರ್ ಸೇವಾಸಂಘದ ಅಣಂಗೂರು ಉಪಸಂಘದ ವತಿಯಿಂದ ನಿವೃತ್ತಿ ಜೀವನಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ ಡಾಕ್ಟರ್ ಮಹೇಶ್ ಕೆ.ಜಿ.ಅಣಂಗೂರು ಅವರನ್ನು ಅಣಂಗೂರಿನ ಅರುಣ್ ಕಾಂಪ್ಲೆಕ್ಸ್‍ನಲ್ಲಿ ಅಭಿನಂದಿಸಲಾಯಿತು.
ಜಿಲ್ಲಾ ಸಂಘದ ಮಾಜಿ ಗೌರವಾಧ್ಯಕ್ಷ ಕೃಷ್ಣಮೂರ್ತಿ ಅವರು ಶಾಲು ಹೊದಿಸಿ ಫಲಪುಷ್ಪ ನೀಡಿ ಪ್ರೀತಿಪೂರ್ವಕವಾಗಿ ಗೌರವಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಂಘದ ಗೌರವಾಧ್ಯಕ್ಷ ನಿರಂಜನ ಕೊರಕೋಡು, ಜಿಲ್ಲಾ ಸಂಘದ ಅಧ್ಯಕ್ಷ ಕಮಲಾಕ್ಷ ಕಲ್ಲುಗದ್ದೆ, ಉಪಸಂಘದ ಅಧ್ಯಕ್ಷರಾದ ಕಮಲಾಕ್ಷ ಅಣಂಗೂರು, ಶ್ರೀ ಲಕ್ಷ್ಮಣಾನಂದ ಸರಸ್ವತಿ ಮಹಿಳಾ ಭಜನಾ ಸಂಘದ ಗೌರವಾಧ್ಯಕ್ಷೆ ಹಾಗು ಜಿಲ್ಲಾ ಮಹಿಳಾ ಸಂಘದ ಗೌರವಾಧ್ಯಕ್ಷೆ ಆಶಾ ರಾಧಾಕೃಷ್ಣ ಮೊದಲಾದವರು ಉಪಸ್ಥಿತರಿದ್ದರು.