ಕೋಲ್ಕತ್ತ: ಮಣಿಪುರ ಹಿಂಸಾಚಾರ ಕುರಿತಂತೆ ಕೇಂದ್ರ ಮತ್ತು ಮಣಿಪುರ ಸರ್ಕಾರದ ವಿರುದ್ಧ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಖಂಡನಾ ನಿರ್ಣಯವನ್ನು ಅಂಗೀಕರಿಸಲಾಗಿದೆ.
ಕೋಲ್ಕತ್ತ: ಮಣಿಪುರ ಹಿಂಸಾಚಾರ ಕುರಿತಂತೆ ಕೇಂದ್ರ ಮತ್ತು ಮಣಿಪುರ ಸರ್ಕಾರದ ವಿರುದ್ಧ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಖಂಡನಾ ನಿರ್ಣಯವನ್ನು ಅಂಗೀಕರಿಸಲಾಗಿದೆ.
ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷವು ಮಣಿಪುರ ಸಮಸ್ಯೆಯ ಬಗ್ಗೆ ರಾಷ್ಟ್ರಮಟ್ಟದಲ್ಲಿ ಧ್ವನಿಯೆತ್ತಿದೆ.
'ಮಣಿಪುರದಲ್ಲಿ ನಡೆದಿರುವ ಹಿಂಸಾತ್ಮಕ ಘಟನೆಗಳು ನಾಚಿಕೆಗೇಡಿನ ಕೃತ್ಯವಾಗಿದೆ. ಅಲ್ಲಿ ಅನೇಕರು ಸಾವಿಗೀಡಾಗಿದ್ದಾರೆ. ಹಲವು ಮನೆಗಳನ್ನು ಸುಟ್ಟು ಹಾಕಲಾಗಿದೆ. ಮಕ್ಕಳು ಸೇರಿದಂತೆ ಸಾರ್ವಜನಿಕರು ಆಹಾರದಿಂದ ವಂಚಿತರಾಗಿದ್ದು, ಮಹಿಳೆಯರಿಗೆ ಗೌರವವಿಲ್ಲ' ಎಂದು ಸಂಸದೀಯ ವ್ಯವಹಾರಗಳ ಇಲಾಖೆಯ ಸಚಿವ ಸೋಭಾಂದೇಬ್ ಚಟ್ಟೋಪಾಧ್ಯಾಯ ಬೇಸರ ಹೊರಹಾಕಿದ್ದಾರೆ.
ಮಣಿಪುರದಲ್ಲಿ ಕುಕಿ ಬುಡಕಟ್ಟು ಸಮುದಾಯದ ಇಬ್ಬರು ಮಹಿಳೆಯರನ್ನು ಬೆತ್ತಲುಗೊಳಿಸಿ, ಲೈಂಗಿಕ ದೌರ್ಜನ್ಯ ನಡೆಸಿದ ಮತ್ತು ಒಬ್ಬ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಕೃತ್ಯಕ್ಕೆ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.
ಮಣಿಪುರದಲ್ಲಿ ಶಾಂತಿ ಸ್ಥಾಪನೆಗೆ ಸರ್ಕಾರ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ವಿರೋಧ ಪಕ್ಷಗಳ ನಾಯಕರು ಒತ್ತಾಯಿಸಿದ್ದಾರೆ. ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕೇಂದ್ರ ಮತ್ತು ಮಣಿಪುರ ಸರ್ಕಾರವನ್ನು ಟೀಕಿಸಿದ್ದಾರೆ.