ಕಲ್ಕತ್ತಾ: ಪಾಕಿಸ್ತಾನದ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಕಲ್ಕತ್ತಾ ಪೊಲೀಸರು ಬಿಹಾರ ಮೂಲದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಖಾಸಗಿ ಕೊರಿಯರ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಕಲ್ಕತ್ತಾ: ಪಾಕಿಸ್ತಾನದ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಕಲ್ಕತ್ತಾ ಪೊಲೀಸರು ಬಿಹಾರ ಮೂಲದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಖಾಸಗಿ ಕೊರಿಯರ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಆರೋಪಿ ಬಳಿ ಭಾರತ ಸರ್ಕಾರ ಹಾಗೂ ಸೇನೆಗೆ ಸಂಬಂಧಿಸಿದ ಅತಿಸೂಕ್ಷ್ಮ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದ್ದು, ಆತ ಬೇಹುಗಾರಿಕೆ ನಡೆಸುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಬಂಧಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಅತಿಸೂಕ್ಷ್ಮ ದಾಖಲೆಗಳ ರವಾನೆ
ಆರೋಪಿ ಬಂಧನದ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಬಂಧಿತ ಈ ಹಿಂದೆ ದೆಹಲಿಯಲ್ಲಿ ಕೆಲ ತಿಂಗಳುಗಳ ಕಾಲ ವಾಸವಿದ್ದ. ಆ ನಂತರ ಕಲ್ಕತ್ತಾಗೆ ಸ್ಥಳಾಂತರಗೊಂಡು ಖಾಸಗಿ ಕೊರಿಯರ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಆತ ಪಾಕಿಸ್ತಾನದ ಗುಪ್ತಚರ ಸಂಸ್ಥೆಗೆ ಬೇಹುಗಾರಿಕೆ ಮಾಡುತ್ತಿದ್ದಾನೆ ಎಂದು ಖಚಿತ ದೊರೆತ ನಂತರ ಆತನನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿ ದೇಶಕ್ಕೆ ಹಾನಿಯುಂಟು ಮಾಡುವ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಕಂಡು ಬಂದಿದೆ. ಇದಲ್ಲದೆ ಆತ ಭಾರತ ಸರ್ಕಾರ ಹಾಗೂ ಸೇನೆಗೆ ಸಂಬಂಧಿಸಿದ ಅತಿಸೂಕ್ಷ್ಮ ದಾಖಲೆಗಳನ್ನು ಪಾಕಿಸ್ತಾನ ಗುಪ್ತಚರ ಏಜೆಂಟರ ಬಳಿ ಹಂಚಿಕೊಂಡಿದ್ದಾನೆ. ತನಿಖೆ ಪ್ರಗತಿಯಲ್ಲಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪ್ರಕರಣದ ಕುರಿತು ಮಾಹಿತಿ ನೀಡಿದ್ದಾರೆ.