HEALTH TIPS

ಸಂಸತ್‌: ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಮಸೂದೆ ಅಂಗೀಕಾರ

                ವದೆಹಲಿ: 'ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಮಸೂದೆ-2023' ಅನ್ನು ರಾಜ್ಯಸಭೆಯಲ್ಲಿ ಬುಧವಾರ ಅಂಗೀಕರಿಸಲಾಯಿತು.

                   ಮಣಿಪುರದಲ್ಲಿನ ಪರಿಸ್ಥಿತಿ ವಿಚಾರವಾಗಿ ವಿರೋಧ ಪಕ್ಷಗಳು ಸಭಾತ್ಯಾಗ ಮಾಡಿದ ನಂತರ ಧ್ವನಿಮತದ ಮೇಲೆ ಮಸೂದೆಯನ್ನು ಅಂಗೀಕರಿಸಲಾಯಿತು.

               'ಖಾಸಗಿತನ ಹಕ್ಕ'ನ್ನು ಮೂಲಭೂತ ಹಕ್ಕು ಎಂದು ಸುಪ್ರೀಂಕೋರ್ಟ್‌ ಘೋಷಿಸಿದ ಆರು ವರ್ಷಗಳ ನಂತರ ಈ ಕುರಿತ ಮಸೂದೆಯನ್ನು ಮಂಡಿಸಿ, ಅಂಗೀಕಾರ ಪಡೆದಂತಾಗಿದೆ.

               ಆನ್‌ಲೈನ್‌ ವೇದಿಕೆಗಳಲ್ಲಿ ಜನರ ವೈಯಕ್ತಿಕ ದತ್ತಾಂಶ ದುರ್ಬಳಕೆಯಾಗುವುದನ್ನು ತಡೆಯುವ ಅವಕಾಶಗಳನ್ನು ಈ ಮಸೂದೆ ಒಳಗೊಂಡಿದೆ.

               ಇದಕ್ಕೂ ಮುನ್ನ ಮಸೂದೆ ಮಂಡಿಸಿ ಮಾತನಾಡಿದ ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್, 'ಮಸೂದೆ ಕುರಿತು ವಿರೋಧ ಪಕ್ಷಗಳು ಚರ್ಚೆ ನಡೆಸಬೇಕಿತ್ತು. ನಾಗರಿಕರ ಹಕ್ಕುಗಳ ಬಗ್ಗೆ ವಿಪಕ್ಷಗಳ ಯಾವುದೇ ನಾಯಕ ಅಥವಾ ಸದಸ್ಯರಿಗೆ ಕಾಳಜಿ ಇಲ್ಲ' ಎಂದರು.

               ಅಂಗೀಕಾರ: ದೇಶದ ವಿಶ್ವವಿದ್ಯಾಲಯಗಳಲ್ಲಿ ಕೈಗೊಳ್ಳುವ ಸಂಶೋಧನೆಗೆ ಅನುದಾನ ಒದಗಿಸುವ ಸಂಸ್ಥೆಯೊಂದರ ಸ್ಥಾಪನೆ ಸೇರಿದಂತೆ ಮಹತ್ವದ ಅವಕಾಶಗಳನ್ನು ಒಳಗೊಂಡಿರುವ 'ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನ ಮಸೂದೆ-2023' ಅನ್ನು ಕೂಡ ರಾಜ್ಯಸಭೆಯಲ್ಲಿ ಅಂಗೀಕರಿಸಲಾಯಿತು.

                ಸಚಿವ ಜಿತೇಂದ್ರ ಸಿಂಗ್‌ ಮಸೂದೆ ಮಂಡಿಸಿದರು. ವಿಪಕ್ಷಗಳ ಸದಸ್ಯರು ಅದಾಗಲೇ ಸಭಾತ್ಯಾಗ ಮಾಡಿದ್ದರಿಂದಾಗಿ, ಧ್ವನಿ ಮತದ ಮೂಲಕ ಮಸೂದೆಯನ್ನು ಅಂಗೀಕರಿಸಲಾಯಿತು.

ಈ ಎರಡೂ ಮಸೂದೆಗಳನ್ನು ಲೋಕಸಭೆಯಲ್ಲಿ ಸೋಮವಾರ ಅಂಗೀಕರಿಸಲಾಗಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries