HEALTH TIPS

ವಿಎಚ್‌ಪಿ ಪ್ರತಿಭಟನೆ: 'ದ್ವೇಷ ಭಾಷಣ, ಗಲಭೆಗೆ ಅವಕಾಶ ನೀಡದಂತೆ ಎಚ್ಚರ ವಹಿಸಿ'

               ವದೆಹಲಿ: ಹರಿಯಾಣದ ನೂಹ್‌ ಜಿಲ್ಲೆಯಲ್ಲಿ ನಡೆದ ಕೋಮು ಗಲಭೆ ಖಂಡಿಸಿ ದೆಹಲಿ-ಎನ್‌ಸಿಆರ್‌ ವಲಯದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ನಡೆಸುತ್ತಿರುವ ಪ್ರತಿಭಟನಾ ಮೆರವಣಿಗೆಯಲ್ಲಿ ದ್ವೇಷ ಭಾಷಣಕ್ಕೆ ಅವಕಾಶ ನೀಡದಂತೆ ಹಾಗೂ ಗಲಭೆ ಉಂಟಾಗದಂತೆ ಎಚ್ಚರ ವಹಿಸುವಂತೆ ಕೇಂದ್ರ ಮತ್ತು ರಾಜ್ಯಕ್ಕೆ ಸುಪ್ರೀಂ ಕೋರ್ಟ್ ಬುಧವಾರ ಸೂಚಿಸಿದೆ.

              ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ಎಸ್‌.ವಿ.ಭಟ್ಟಿ ಅವರನ್ನೊಳಗೊಂಡ ಪೀಠವು ಸರ್ಕಾರಗಳಿಗೆ ನಿರ್ದೇಶಿಸಿ, 'ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್, ಅರೆ ಸೇನಾ ಪಡೆಗಳನ್ನು ನಿಯೋಜಿಸಬೇಕು. ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು' ಎಂದಿದ್ದಾರೆ.

             ಶಾಹೀನ್ ಅಬ್ದುಲ್ಲಾ ಅವರ ಪರವಾಗಿ ಹಿರಿಯ ವಕೀಲ ಸಿ.ಯು.ಸಿಂಗ್ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಬಲಪಂಥೀಯ ಸಂಘಟನೆಗಳಾದ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ದೆಹಲಿಯ ವಿವಿಧ ಭಾಗಗಳಲ್ಲಿ ನಡೆಸಲು ಉದ್ದೇಶಿಸಿರುವ ಪ್ರತಿಭಟನೆ ಸಂದರ್ಭದಲ್ಲಿ ತೀವ್ರ ನಿಗಾ ವಹಿಸುವಂತೆ ಸೂಚಿಸಿದೆ.

               ಹರಿಯಾಣದ ನೂಹ್‌ನಲ್ಲಿ ಜುಲೈ 31ರಂದು ನಡೆದ ಕೋಮ ಗಲಭೆಯಲ್ಲಿ ಆರು ಜನ ಮೃತಪಟ್ಟಿದ್ದಾರೆ. ಇವರಲ್ಲಿ ಇಬ್ಬರು ಗೃಹರಕ್ಷಕ ದಳದವರೂ ಸೇರಿದ್ದಾರೆ. ಈವರೆಗೂ 116 ಜನರ ಬಂಧನವಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.

                                                        ಸರ್ಕಾರಗಳಿಗೆ ನೋಟಿಸ್
                ಕೋಮು ಗಲಭೆ ಖಂಡಿಸಿ ವಿಎಚ್‌ಪಿ ನಡೆಸುತ್ತಿರುವ ಪ್ರತಿಭಟನಾ ಮೆರವಣಿಗೆಗೆ ತಡೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಉತ್ತರ ಪ್ರದೇಶ, ಹರಿಯಾಣ ಮತ್ತು ದೆಹಲಿ ಸರ್ಕಾರಗಳಿಗೆ ನೋಟಿಸ್ ನೀಡಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries