ಇಂಫಾಲ: ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿ, ತಪ್ಪು ಮಾಹಿತಿ ಸೃಷ್ಟಿಸುವುದು ಅಥವಾ ಹರಡುವುದನ್ನು ದೇಶದ್ರೋಹವೆಂದು ಪರಿಗಣಿಸಬೇಕಾಗುತ್ತದೆ ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.
ಇಂಫಾಲ: ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿ, ತಪ್ಪು ಮಾಹಿತಿ ಸೃಷ್ಟಿಸುವುದು ಅಥವಾ ಹರಡುವುದನ್ನು ದೇಶದ್ರೋಹವೆಂದು ಪರಿಗಣಿಸಬೇಕಾಗುತ್ತದೆ ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.
ತಪ್ಪು ಮಾಹಿತಿ ಹರಡಿದರೆ ದೇಶದ್ರೋಹದ ಆರೋಪದಡಿ ಪ್ರಕರಣ ದಾಖಲಿಸಲಾಗುವುದು ಎಂದು ಸರ್ಕಾರ ಆದೇಶವನ್ನು ಉಲ್ಲೇಖಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಶಾಂತಿ ಸ್ಥಾಪಿಸಲು ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಆದ್ದರಿಂದ ತಪ್ಪು ಮಾಹಿತಿಯನ್ನು ಸೃಷ್ಟಿಸುವುದು ಅಥವಾ ಹರಡುವುದು ದೇಶದ್ರೋಹಕ್ಕೆ ಕಾರಣವಾಗುತ್ತದೆ ಎಂದು ಮುಖ್ಯ ಕಾರ್ಯದರ್ಶಿ ವಿನೀತ್ ಜೋಶಿ ಹೇಳಿದ್ದಾರೆ.
ಮಣಿಪುರ ಹಿಂಸಾಚಾರ ಕುರಿತಾದ ಅಥವಾ ಯಾವುದೇ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮುನ್ನ ಪರಿಶೀಲಿಸಿಕೊಳ್ಳಬೇಕು. ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಅಥವಾ ಸುಳ್ಳು ವದಂತಿಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜೋಶಿ ಹೇಳಿದ್ದಾರೆ.
ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಕಾನೂನು ಮತ್ತು ಸುವ್ಯವಸ್ಥೆಯನ್ನು ಹದಗೆಡಿಸುವ ಉದ್ದೇಶದಿಂದ ಸುಳ್ಳು ಸುದ್ದಿ ಹರಡುವುದು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಹಿಂಜರಿಯುವುದಿಲ್ಲ ಎಂದು ಅಧಿಸೂಚನೆ ಹೊರಡಿಸಲಾಗಿದೆ.