ಪೆರ್ಲ: ಕಾಟುಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಸಂಭ್ರಮದ 77 ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲಿ ಶಾಲಾ ಅಡಳಿತ ಮಂಡಳಿ ಅಧ್ಯಕ್ಷ ಸಂಜೀವ ರೈ ಧ್ವಜಾರೋಹಣ ನಡೆಸಿ ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಮತ್ತು ಬಲಿದಾನಗೈದ ಹೊರಟಗಾರನ್ನು ನೆನಪಿಸಿದರು. ಪರಕೀಯರ ಆಕ್ರಮಣವನ್ನು ಎದುರಿಸಿ ಲಭಿಸಿದ ಸ್ವಾತಂತ್ರ್ಯವನ್ನು ಸಂರಕ್ಷಿಸುವ ಜವಾಬ್ದಾರಿ ಇಂದಿನ ತಲೆಮಾರಿನ ಜನತೆಗೆ ಇದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಪ್ರಬಂಧಕ ಮಿತ್ತೂರು ಪುರುಷೋತ್ತಮ ಭಟ್ ಶುಭಹಾರೈಸಿ, ಸ್ವಾತಂತ್ರ್ಯ ಹೋರಾಟಗಾರರ ಹೋರಾಟದ ಕೆಚ್ಚನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಶಾಲಾ ಪಿ ಟಿ ಎ ಅಧ್ಯಕ್ಷ ರಾಧಾಕೃಷ್ಣ ಆಚಾರ್ಯ ಉಪಸ್ಥಿತರಿದ್ದು ಮಾತನಾಡಿದರು.
ಪ್ರಾಂಶುಪಾಲ ಪದ್ಮನಾಭ ಶೆಟ್ಟಿ ಸ್ವಾಗತಿಸಿ, ಮುಖ್ಯೋಪಾಧ್ಯಾಯ ಹರಿಪ್ರಾಸಾದ್ ಶೆಟ್ಟಿ ವಂದಿಸಿದರು. ಎನ್ ಸಿ ಸಿ ವಿದ್ಯಾರ್ಥಿಗಳಿಂದ ಪರೇಡ್ ನಡೆಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ವಿದ್ಯಾರ್ಥಿ ಮನೀಶ್ ನೇತೃತ್ವವಹಿಸಿದರು. ನಂತರ ಹೈಸ್ಕೂಲ್ ಹಾಗೂ ಹೈಯರ್ ಸೆಕೆಂಡರಿ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ಜರುಗಿತು. ಹೈಯರ್ ಸೆಕೆಂಡರಿಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಸಂಜೀವ ರೈ ಉದ್ಘಾಟಿಸಿದರು. ಪ್ರಾಂಶುಪಾಲ ಪದ್ಮನಾಭ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸರಸ್ವತಿ ಪ್ರಸನ್ನ ಹಾಗೂ ರಮಣಿ ಎಂ ಎಸ್ ಮಾತನಾಡಿದರು. ರಾಜೇಶ್ ಸಿ ಎಚ್ ಸ್ವಾಗತಿಸಿ, ಈಶ್ವರ ನಾಯಕ್ ವಂದಿಸಿದರು. ಮಹೇಶ್ ಏತಡ್ಕ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.