ಇಂಫಾಲ್: ಹಿಂಸಾಚಾರ ಪೀಡಿತ ಮಣಿಪುರದ ವಿವಿಧ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳು ಬುಧವಾರ ಶೋಧ ಕಾರ್ಯಾಚರಣೆ ಕೈಗೊಂಡಿದ್ದ ವೇಳೆ ಎಂಟು ಪಿಸ್ತೂಲ್‌ಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂಫಾಲ್: ಹಿಂಸಾಚಾರ ಪೀಡಿತ ಮಣಿಪುರದ ವಿವಿಧ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳು ಬುಧವಾರ ಶೋಧ ಕಾರ್ಯಾಚರಣೆ ಕೈಗೊಂಡಿದ್ದ ವೇಳೆ ಎಂಟು ಪಿಸ್ತೂಲ್‌ಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಷ್ಣುಪುರ, ಚುರಚಾಂದ್‌ಪುರ, ತೆಂಗ್‌ನೌಪಾಲ್, ಕಂಗ್ಪೋಕ್ಪಿ ಮತ್ತು ಇಂಫಾಲ್ ಪೂರ್ವ ಜಿಲ್ಲೆಗಳಲ್ಲಿ ಭದ್ರತಾ ಪಡೆಗಳು ಶೋಧಕಾರ್ಯ ನಡೆಸಿದವು.
'ಹಠಾತ್ ಆಗಿ ನಡೆಯುವ ಗುಂಡಿನ ದಾಳಿ ಮತ್ತು ಪ್ರತಿಭಟನನಿರತರು ಒಂದೆಡೆ ಸೇರುವ ಕಾರಣ ರಾಜ್ಯದಲ್ಲಿ ಆತಂಕಕಾರಿ ಪರಿಸ್ಥಿತಿ ಮುಂದುವರೆದಿದೆ' ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.
ಮಾದಕವಸ್ತು ವಶ: ಅಸ್ಸಾಂನ ನಾಲ್ವರನ್ನು ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ಇವರಿಂದ 1,240 ಬಾಟಲಿ ಕೊಡೈನ್ ಫಾಸ್ಪೇಟ್ (ಮತ್ತು ಬರಿಸುವ ನೋವು ನಿವಾರಕ ಔಷಧ) ರಾಸಾಯನಿಕವನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.