ನವದೆಹಲಿ: ದೆಹಲಿ ಸೇವಾ ವಿಷಯಗಳ ಆಡಳಿತಾತ್ಮಕ ನಿಯಂತ್ರಣ ಕುರಿತ ಸುಗ್ರೀವಾಜ್ಞೆಯನ್ನು ಬದಲಿಸುವ ಮಸೂದೆಗೆ ರಾಜ್ಯಸಭೆಯಲ್ಲಿ ಸೋಲಾಗಲಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಸಂಸದ ಸಂಜಯ್ ಸಿಂಗ್ ಬುಧವಾರ ಹೇಳಿದರು.
ನವದೆಹಲಿ: ದೆಹಲಿ ಸೇವಾ ವಿಷಯಗಳ ಆಡಳಿತಾತ್ಮಕ ನಿಯಂತ್ರಣ ಕುರಿತ ಸುಗ್ರೀವಾಜ್ಞೆಯನ್ನು ಬದಲಿಸುವ ಮಸೂದೆಗೆ ರಾಜ್ಯಸಭೆಯಲ್ಲಿ ಸೋಲಾಗಲಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಸಂಸದ ಸಂಜಯ್ ಸಿಂಗ್ ಬುಧವಾರ ಹೇಳಿದರು.
'ಇಂಡಿಯಾ' ಮೈತ್ರಿಕೂಟದ ಅಂಗಪಕ್ಷಗಳ ಎಲ್ಲ ಸದಸ್ಯರು ರಾಜ್ಯಸಭೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿ ಪ್ರದೇಶ ಸರ್ಕಾರ (ತಿದ್ದುಪಡಿ) ಮಸೂದೆ-2023 ಅನ್ನು ವಿರೋಧಿಸುವರು' ಎಂದು ಪಿಟಿಐಗೆ ತಿಳಿಸಿದ್ದಾರೆ.
'ಈ ಮಸೂದೆಯು ಅಸಾಂವಿಧಾನಿಕ. ಒಕ್ಕೂಟ ವ್ಯವಸ್ಥೆ ಹಾಗೂ ಪ್ರಜಾಪ್ರಭುತ್ವ ವಿರೋಧಿ' ಎಂದು ಪುನರುಚ್ಚರಿಸಿದರು.
'ಚುನಾಯಿತ ಸರ್ಕಾರದ ಬಳಿಯೇ ಆಡಳಿತಾತ್ಮಕ ಅಧಿಕಾರ ಇರಬೇಕು. ಸಾರ್ವಜನಿಕ ವ್ಯವಸ್ಥೆ ಮತ್ತು ಪೊಲೀಸ್ ವಿಷಯಗಳನ್ನು ಹೊರತುಪಡಿಸಿದಂತೆ ರಾಷ್ಟ್ರ ರಾಜಧಾನಿಯ ಸೇವೆಗಳಿಗೆ ಸಂಬಂಧಿಸಿದ ಎಲ್ಲ ಅಧಿಕಾರ ದೆಹಲಿ ಸರ್ಕಾರದ ಬಳಿಯೇ ಇರಬೇಕು ಎಂದು ಸುಪ್ರೀಂಕೋರ್ಟ್ ಮೇ 11ರಂದು ನೀಡಿದ ತೀರ್ಪಿನಲ್ಲಿ ಹೇಳಿದೆ' ಎಂದು ಸಿಂಗ್ ತಿಳಿಸಿದರು.
ಕೇಂದ್ರ ಸರ್ಕಾರ ಮೇ 19ರಂದು ಸುಗ್ರೀವಾಜ್ಞೆ ಹೊರಡಿಸಿತು. ಕೇಂದ್ರದ ಈ ನಡೆಯನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.