ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು (ಸಿಡಬ್ಲ್ಯುಸಿ) ರಚಿಸಿದ್ದಾರೆ.
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು (ಸಿಡಬ್ಲ್ಯುಸಿ) ರಚಿಸಿದ್ದಾರೆ.
ಛತ್ತೀಸಗಢದ ರಾಯಪುರದಲ್ಲಿ ಪಕ್ಷದ 85ನೇ ಮಹಾಅಧಿವೇಶನದ ಭಾಗವಾಗಿ ಫೆಬ್ರುವರಿಯಲ್ಲಿ ನಡೆದ ಕಾಂಗ್ರೆಸ್ ಚಾಲನಾ ಸಮಿತಿ ಸಭೆಯು ಸಿಡಬ್ಲ್ಯುಸಿಗೆ ಸದಸ್ಯರ ನೇಮಕಕ್ಕೆ ಚುನಾವಣೆಯನ್ನು ನಡೆಸದಿರಲು ನಿರ್ಧರಿಸಿತ್ತು.
ಈ ಸಮಿತಿಗೆ ಸದಸ್ಯರ ನಾಮನಿರ್ದೇಶನ ಮಾಡುವ ಸಂಪೂರ್ಣ ಅಧಿಕಾರವನ್ನು ಖರ್ಗೆ ಅವರಿಗೆ ಸರ್ವಾನುಮತದಿಂದ ನೀಡಿತ್ತು.