ಇಂಫಾಲ: ಮಣಿಪುರದ ಬೆತ್ತಲೆ ಮೆರವಣಿಗೆ ಪ್ರಕರಣ ಸಂಬಂಧ ತೌಬಲ್ ಜಿಲ್ಲೆಯ ನಾಂಗ್ಪೋಕ್ ಸೆಕ್ಮೈ ಪೊಲೀಸ್ ಠಾಣಾಧಿಕಾರಿ ಇತರ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ಇಂಫಾಲ: ಮಣಿಪುರದ ಬೆತ್ತಲೆ ಮೆರವಣಿಗೆ ಪ್ರಕರಣ ಸಂಬಂಧ ತೌಬಲ್ ಜಿಲ್ಲೆಯ ನಾಂಗ್ಪೋಕ್ ಸೆಕ್ಮೈ ಪೊಲೀಸ್ ಠಾಣಾಧಿಕಾರಿ ಇತರ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ಮೇ 4ರಂದು ನಡೆದಿದ್ದ ಹೇಯ ಕೃತ್ಯದ ವಿಡಿಯೊ ಜುಲೈ 19ರಂದು ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿತ್ತು.
ಮಣಿಪುರದಲ್ಲಿ ಕುಕಿ ಬುಡಕಟ್ಟು ಸಮುದಾಯದ ಮೂವರು ಮಹಿಳೆಯರನ್ನು ಬೆತ್ತಲುಗೊಳಿಸಿ, ಲೈಂಗಿಕ ದೌರ್ಜನ್ಯ ನಡೆಸಿದ ಮತ್ತು ಒಬ್ಬ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಕೃತ್ಯಕ್ಕೆ ದೇಶದಾದ್ಯಂತ ಆಘಾತ ಮತ್ತು ಆಕ್ರೋಶ ವ್ಯಕ್ತವಾಗಿದೆ.
ಮಣಿಪುರದಲ್ಲಿ ಶಾಂತಿ ಸ್ಥಾಪನೆಗೆ ಸರ್ಕಾರ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ವಿರೋಧ ಪಕ್ಷಗಳ ನಾಯಕರು ಒತ್ತಾಯಿಸಿದ್ದಾರೆ. ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕೇಂದ್ರ ಮತ್ತು ಮಣಿಪುರ ಸರ್ಕಾರವನ್ನು ಟೀಕಿಸಿದ್ದಾರೆ.
ಬಿಷ್ಣುಪುರದ ನರನ್ಸೇನಾದಲ್ಲಿರುವ ಎರಡನೇ ಭಾರತೀಯ ಮೀಸಲು ಪಡೆಯ (ಐಆರ್‌ಬಿ) ಕೇಂದ್ರ ಕಚೇರಿಗೆ ಗುರುವಾರ ಬೆಳಿಗ್ಗೆ ಪ್ರಬಲ ವರ್ಗದ ಗುಂಪೊಂದು ನುಗ್ಗಿ, ರೈಫಲ್, ಬುಲೆಟ್‌ಗಳನ್ನು ಸೇರಿದಂತೆ ಹಲವಾರು ಶಸ್ತ್ರಾಸ್ತ್ರಗಳನ್ನು ಕಳ್ಳತನ ಮಾಡಿತ್ತು. ಈ ಪ್ರಕರಣ ಸಂಬಂಧ ತನಿಖೆ ತೀವ್ರಗೊಳಿಸಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.