ಉಪ್ಪಳ: ಕೊಂಡೆವೂರು ಮಠದ ನೂತನ ಶಾಲಾ ಕಟ್ಟಡಕ್ಕೆ ಶಿಲಾನ್ಯಾಸ ಸಮಾರಂಭ ಆ.20 ರಂದು ಭಾನುವಾರ ಬೆಳಿಗ್ಗೆ 10.30ಕ್ಕೆ ನಡೆಯಲಿರುವುದು. ಶ್ರೀಯೋಗಾನಂದ ಸರಸ್ವತೀ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆಯುವ ಸಮಾರಂಭದಲ್ಲಿ ಉದ್ಯಮಿ ಸದಾಶಿವ ಶೆಟ್ಟಿ ಕುಳೂರು ಕನ್ಯಾನ ಶಿಲಾನ್ಯಾಸ ನೆರವೇರಿಸಲಿದ್ದು, ಕೇಂದ್ರ ಸಚಿವ ಶ್ರೀಪಾದ ಯಸ್ಸೋ ನಾಯಕ್ ಅಧ್ಯಕ್ಷತೆ ವಹಿಸುವರು.
ರಾಜ್ಯಸಭಾ ಸದಸ್ಯ ಕೆ.ನಾರಾಯಣ್, ಎನ್.ಎಂ.ಪಿ.ಟಿ ಅಧ್ಯಕ್ಷ ಡಾ.ವೆಂಕಟರಮಣ ಅಕ್ಕರಾಜು, ಬೆಂಗಳೂರಿನ ಆಕ್ಸ್‍ಫರ್ಡ ವಿದ್ಯಾಸಂಸ್ಥೆಗಳ ಅಧ್ಯಕ್ಷ ರಮೇಶ್‍ರಾಜು, ಮುಂಬಯಿಯ ಹೇರಂಭ ಇಂಡಸ್ಟ್ರೀಸ್ ಎಂ.ಡಿ. ರಘುರಾಮ ಶೆಟ್ಟಿ ಕುಳೂರು ಕನ್ಯಾನ, ಮಾಜಿ ರಾಜ್ಯಸಭಾ ಸದಸ್ಯ ಡಾ.ಕೆ.ಸಿ. ರಾಮಮೂರ್ತಿ, ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ಯುನೈಟೆಡ್ ಆಸ್ಪತ್ರೆ ಕಾಸರಗೋಡಿನ ಡಾ.ಮಂಜುನಾಥ ಶೆಟ್ಟಿ, ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಬಿ.ಎಸ್. ಸೋಮಶೇಖರ್, ದೇವಾಂಗ ಸಂಘ ಬೆಂಗಳೂರು ಅಧ್ಯಕ್ಷ ಎಂ.ಪಿ. ಉಮಾಶಂಕರ್, ಮಂಗಳೂರಿನ ಉದ್ಯಮಿ ಎ.ಜೆ ಶೇಖರ್, ಮಾಜಿ ವಿಧಾನಪರಿಷತ್ತು ಸದಸ್ಯ ಮೋನಪ್ಪ ಭಂಡಾರಿ ಮತ್ತು ಉದ್ಯಮಿ ಶಶಿಧರ ಶೆಟ್ಟಿ ಗ್ರಾಮಚಾವಡಿ ಮುಂತಾದವರು ಮುಖ್ಯಅತಿಥಿಗಳಾಗಿ ಪಾಲ್ಗೊಳ್ಳುವರು. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾಭಿಮಾನಿಗಳು ಆಗಮಿಸಿ ಕಾರ್ಯಕ್ರಮ ಯಶಸ್ಸಿಗೆ ಸಹಕರಿಸಬೇಕೆಂದು ಶ್ರೀಮಠದ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.