HEALTH TIPS

ಹಿಮಾಚಲ ಪ್ರದೇಶ: ಭೂಕುಸಿತದಿಂದ ಧರೆಗುರುಳಿದ ಬಹುಮಹಡಿ ಕಟ್ಟಡಗಳು

              ಹಿಮಾಚಲ ಪ್ರದೇಶ: ಹಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಹಿಮಾಚಲ ಪ್ರದೇಶದಲ್ಲಿ ಮಳೆ ಸಂಬಂಧಿ ಅವಘಡಗಳು, ಪ್ರಾಣ ಹಾನಿ ವರದಿಯಾಗುತ್ತಲೇ ಇವೆ.

                 ಹಿಮಾಚಲ ಪ್ರದೇಶದ ಕುಲ್ಲುವಿನ ಅನ್ನಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಅನೇಕ ಮನೆಗಳು ಏಕಾಏಕಿ ನೆಲಸಮವಾಗಿವೆ.


                 ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆಯಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

                ಬಹುಮಹಡಿ ಕಟ್ಟಡಗಳು ನೆಲಕ್ಕುರುಳುವ ದೃಶ್ಯಗಳ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.

              ಇಂದಿನಿಂದ ಎರಡು ದಿನಗಳ ಕಾಲ ಭಾರತೀಯ ಹವಾಮಾನ ಇಲಾಖೆ ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್‌ ಘೋಷಣೆ ಮಾಡಿದೆ.

ಭೂಕುಸಿತ, ಪ್ರವಾಹ ಪರಿಸ್ಥಿತಿಯಿಂದ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಮಂಡಿ- ಕುಲ್ಲು ರಾಷ್ಟ್ರೀಯ ಹೆದ್ದಾರಿಯಲ್ಲಿ ನೂರಾರು ವಾಹನಗಳು ಸಿಲುಕಿದ್ದು ರಕ್ಷಣಾ ತಂಡ ಕಾರ್ಯಾಚರಣೆ ನಡೆಸುತ್ತಿದೆ.

ಇಡೀ ರಾಜ್ಯವನ್ನೂ ನೈಸರ್ಗಿಕ ವಿಕೋಪ ಪೀಡಿತ ಪ್ರದೇಶ ಎಂದು ಸರ್ಕಾರ ಘೋಷಣೆ ಮಾಡಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries