ಬೆಂಗಳೂರು: ವೃಕ್ಷಮಾತೆ ಎಂದೇ ಖ್ಯಾತಿ ಪಡೆದಿರುವ ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ ಅವರು ಭಾನುವಾರ ತಮ್ಮ ನಿವಾಸದಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, ಅವರನ್ನು ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ಅವರು ನಿನ್ನೆ ಸಂಜೆ 4.30ರ ಸುಮಾರಿಗೆ ಬೆಂಗಳೂರಿನ ಮಂಜುನಾಥನಗರದಲ್ಲಿರುವ ತಮ್ಮ ಮನೆಯಲ್ಲಿ ಕಾಲು ಜಾರಿ ಬಿದ್ದಿದ್ದು, ಮೂಳೆಗೆ ಪೆಟ್ಟಾಗಿದೆ.
112 ವರ್ಷದ ಸಾಲುಮರದ ತಿಮ್ಮಕ್ಕ ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಬೆನ್ನಿನ ಭಾಗಕ್ಕೆ ಸ್ವಲ್ಪ ಪೆಟ್ಟಾಗಿದೆ, ಉಳಿದಂತೆ ಅವರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಕೌಟುಂಬಿಕ ಮೂಲಗಳಿಂದ ತಿಳಿದು ಬಂದಿದೆ.
ತುಮಕೂರಿನ ಗುಬ್ಬಿ ತಾಲೂಕಿನಲ್ಲಿ ಜನಿಸಿದ ತಿಮ್ಮಕ್ಕ ಅವರು ಪರಿಸರದ ಮೇಲಿನ ತಮ್ಮ ಪ್ರೀತಿಯಿಂದ ಸಾಲುಮರದ ತಿಮ್ಮಕ್ಕ ಎಂದೇ ಖ್ಯಾತಿ ಪಡೆದಿದ್ದಾರೆ.