HEALTH TIPS

ಚುನಾವಣಾ ಆಯೋಗದ ರಾಷ್ಟ್ರೀಯ ಐಕಾನ್ ಆಗಿ ಸಚಿನ್ ತೆಂಡೂಲ್ಕರ್ ನೇಮಕ

             ನವದೆಹಲಿ: ಚುನಾವಣಾ ಪ್ರಕ್ರಿಯೆಯಲ್ಲಿ ಹೆಚ್ಚಿನ ಮತದಾರರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಕೇಂದ್ರ ಚುನಾವಣಾ ಆಯೋಗ(ಇಸಿ) ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರನ್ನು "ರಾಷ್ಟ್ರೀಯ ಐಕಾನ್" ಎಂದು  ನೇಮಕ ಮಾಡಿದೆ. 

                 ದೆಹಲಿಯಲ್ಲಿ ಈ ಸಂಬಂಧ ತೆಂಡೂಲ್ಕರ್ ಮತ್ತು ಚುನಾವಣಾ ಸಮಿತಿ ನಡುವೆ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಲಾಗಿದೆ. ಮೂರು ವರ್ಷಗಳ ಒಪ್ಪಂದ ಇದಾಗಿದ್ದು, ತೆಂಡೂಲ್ಕರ್ ಮತದಾರರಲ್ಲಿ ಜಾಗೃತಿ ಮೂಡಿಸಲಿದ್ದಾರೆ.

              ಈ ಸಹಯೋಗವು ಮುಂಬರುವ ಚುನಾವಣೆಗಳಲ್ಲಿ ವಿಶೇಷವಾಗಿ 2024 ರ ಸಾರ್ವತ್ರಿಕ ಚುನಾವಣೆಗಳಲ್ಲಿ (ಲೋಕಸಭೆಗೆ) ಮತದಾರರ ಭಾಗವಹಿಸುವಿಕೆಯನ್ನು ಉತ್ತೇಜಿಸಲಿದೆ" ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

                   ಚುನಾವಣಾ ಆಯೋಗ ಕಳೆದ ವರ್ಷ ನಟ ಪಂಕಜ್ ತ್ರಿಪಾಠಿ ಅವರನ್ನು ರಾಷ್ಟ್ರೀಯ ಐಕಾನ್ ಎಂದು ನೇಮಕ ಮಾಡಿತ್ತು. ಈ ಹಿಂದೆ, 2019 ರ ಲೋಕಸಭಾ ಚುನಾವಣೆಯ ಸಮಯದಲ್ಲಿ, ಎಂಎಸ್ ಧೋನಿ, ಅಮೀರ್ ಖಾನ್ ಮತ್ತು ಮೇರಿ ಕೋಮ್ ಅವರಂತಹ ದಿಗ್ಗಜರನ್ನು ಚುನಾವಣಾ ಆಯೋಗದ ರಾಷ್ಟ್ರೀಯ ಐಕಾನ್‌ಗಳಾಗಿದ್ದರು.



    ಕಾಮೆಂಟ್‌‌ ಪೋಸ್ಟ್‌ ಮಾಡಿ

    0 ಕಾಮೆಂಟ್‌ಗಳು
    * Please Don't Spam Here. All the Comments are Reviewed by Admin.

    Top Post Ad

    Click to join Samarasasudhi Official Whatsapp Group

    Qries

    Qries

    Below Post Ad


    ಜಾಹಿರಾತು














    Qries