ಉತ್ತರಾಖಂಡ: ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸಹೋದರಿಯರು ಉತ್ತರಾಖಂಡದ ಗರ್ವಾಲ್‌ನಲ್ಲಿರುವ ದೇವಸ್ಥಾನವೊಂದರಲ್ಲಿ ಪರಸ್ಪರ ಭೇಟಿಯಾಗಿ, ಉಭಯಕುಶಲೋಪರಿ ವಿಚಾರಿಸಿಕೊಂಡಿದ್ದಾರೆ.
ಉತ್ತರಾಖಂಡ: ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸಹೋದರಿಯರು ಉತ್ತರಾಖಂಡದ ಗರ್ವಾಲ್‌ನಲ್ಲಿರುವ ದೇವಸ್ಥಾನವೊಂದರಲ್ಲಿ ಪರಸ್ಪರ ಭೇಟಿಯಾಗಿ, ಉಭಯಕುಶಲೋಪರಿ ವಿಚಾರಿಸಿಕೊಂಡಿದ್ದಾರೆ.
ಸಹೋದರಿಯರ ಭೇಟಿ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಉಭಯ ಕುಶಲೋಪರಿ ವಿಚಾರಿಸಿಕೊಂಡು ದೇವಾಲಯದೊಳಗೆ ಹೆಜ್ಜೆ ಹಾಕಿರುವ ದೃಶ್ಯ ವಿಡಿಯೊದಲ್ಲಿದೆ.
ಈ ವಿಡಿಯೊವನ್ನು ತಮ್ಮ ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಬಿಜೆಪಿ ನಾಯಕ ಅಜಯ್‌ನಂದಾ, 'ಸಹೋದರಿಯರಿಬ್ಬರ ಭೇಟಿಯು ಭಾರತದ ಸಂಸ್ಕೃತಿ, ಸರಳತೆ, ಸಂಪ್ರದಾಯದ ಸಾರವನ್ನು ಎತ್ತಿ ತೋರಿಸುತ್ತಿದೆ' ಎಂದಿದ್ದಾರೆ.
ಮೋದಿ ಮತ್ತು ಯೋಗಿ ಆದಿತ್ಯನಾಥ್ ಅವರ ಸಹೋದರಿಯರನ್ನು ಕಂಡು ನೆಟ್ಟಿಗರು ಸಂತಸಗೊಂಡಿದ್ದಾರೆ.