ಮಂಜೇಶ್ವರ: ಕುಂಜತ್ತೂರು ಶ್ರಿ ಮಹಾಲಿಂಗೇಶ್ವರ ವಿದ್ಯಾನಿಕೇತನದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ದೇರಳಕಟ್ಟೆ ಕೆ.ಎಸ್ ಹೆಗ್ಡೆ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಡಾ. ಕರುಣಾಕರ ಶೆಟ್ಟಿ ಧ್ವಜಾರೋಹಣ ನಡೆಸಿದರು. ಈ ಸಂದರ್ಭ ಶಾಲಾಮಕ್ಕಳಿಗಾಗಿ ನಿರ್ಮಿಸಲಾಗಿದ್ದ ನೂತನ ಮೈದಾನವನ್ನು ಉದ್ಘಾಟಿಸಿದರು. ವಿದ್ಯಾರ್ಥಿಘಳಿಗಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಿತು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಜಿತೇಶ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಸಆಧನೆಗೈದ ವಿದ್ಯಾರ್ಥಿಘಳನ್ನು ಅಭಿನಂದಿಸಲಾಯಿತು.
ಶ್ರೀಮಹಾಲಿಂಗೇಶ್ವರ ದೇವಸ್ಥಾನ ವಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಶ್ವನಾಥ ಶೆಟ್ಟಿ, ಕ್ಲಬ್ ಅದ್ಯಕ್ಷ ಶೈಲೇಶ್ ಶೆಟ್ಟಿ, ಶಾಲಾ ಸಮಿತಿ ಅಧ್ಯಕ್ಷ ಸುರೇಶ್ ಶೆಟ್ಟಿ, ಸಂಚಲಕ ದಾಮೋದರ್ ಶೆಟ್ಟಿ, ಆಲಾ ಪ್ರಾಂಶುಪಾಲೆ ಬಬಿತಾಸೂರಜ್ ಮೊದಲಾದವರು ಉಪಸ್ಥಿತರಿದ್ದರು.