ಡೆಹ್ರಾಡೂನ್ : ಉತ್ತರಾಖಂಡದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ನಿರಂತರ ಮಳೆಗೆ ಮಾಲ್‌ದೇವತದಲ್ಲಿರುವ 'ಡೆಹ್ರಾಡೂನ್ ಡಿಫೆನ್ಸ್ ಕಾಲೇಜ್'ನ ಕಟ್ಟಡ ಕುಸಿದಿದೆ. ಕಟ್ಟಡ ಕುಸಿಯುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದ ಭಾರತೀಯ ಹವಾಮಾನ ಇಲಾಖೆ, ರಾಜ್ಯದಾದ್ಯಂತ ಭಾನುವಾರ ರೆಡ್ ಅಲರ್ಟ್ ಘೋಷಿಸಿತ್ತು.
ಮುಂದಿನ 24 ಗಂಟೆಗಳ ಕಾಲ ರಾಜ್ಯದ ಆರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ತಿಳಿಸಿತ್ತು.
ಭಾರೀ ಮಳೆಯಿಂದಾಗಿ ಹಲವೆಡೆ ಭೂಕುಸಿತ ಉಂಟಾಗಿದೆ. ಕೆಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, 1,169 ಮನೆಗಳಿಗೆ ಹಾನಿಯಾಗಿದೆ. ಹಲವು ರಸ್ತೆಗಳು ಜಲವೃತಗೊಂಡಿದ್ದು, ಸಂಪರ್ಕ ಕಡಿತಗೊಂಡಿದೆ.
ಇಲ್ಲಿಯವರೆಗೆ ಮಳೆ ಸಂಬಂಧಿತ ಘಟನೆಗಳಿಂದ 52 ಜನರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸರ್ಕಾರ ಅಧಿವೇಶನಕ್ಕೆ ತಿಳಿಸಿದೆ.
ಘಟನೆ ಕುರಿತು ಇನ್ನಷ್ಟು ಮಾಹಿತಿ ಬರಬೇಕಿದೆ.