ನವದೆಹಲಿ: ಕಲ್ಕತ್ತಾ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಅವರನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದ್ದು, ಬುಧವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸೋಮವಾರ ಶ್ರೀವಾತ್ಸವ ಅವರಿಗೆ ನೇಮಕಾತಿ ಪತ್ರ ನೀಡಲಾಗಿದೆ ಎಂದೂ ತಿಳಿಸಿವೆ.
ನ್ಯಾಯಮೂರ್ತಿ ಶ್ರೀವಾಸ್ತವ ಅವರು 2021 ಅಕ್ಟೋಬರ್ 11ರಿಂದ 2023 ಮಾರ್ಚ್ 30ರ ವರೆಗೆ ಕಲ್ಕತ್ತಾ ಹೈಕೋರ್ಟ್‌ನಲ್ಲಿ ಮುಖ್ಯ ನ್ಯಾಯಮೂರ್ತಿಗಳಾಗಿದ್ದರು.
ಶ್ರೀವಾಸ್ತವ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಕೀಲಿಕೆ ಮಾಡಿದ್ದಾರೆ. 2008 ಜನವರಿ 18ರಂದು ಮಧ್ಯಪ್ರದೇಶ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡರು. ನಂತರ 2015 ಜನವರಿ 10ರಂದು ಕಾಯಂ ನ್ಯಾಯಾಧೀಶರಾಗಿ ನೇಮಕಗೊಂಡರು.
ನ್ಯಾಯಮೂರ್ತಿ ಆದರ್ಶ್ ಕುಮಾರ್ ಗೋಯಲ್ ಅವರ ನಿವೃತ್ತಿ ಬಳಿಕ ಶಿಯೊ ಕುಮಾರ್ ಸಿಂಗ್ ಅವರನ್ನು ಹಂಗಾಮಿ ಮುಖ್ಯಸ್ಥರನ್ನಾಗಿ ಕೇಂದ್ರ ಸರ್ಕಾರ ಜುಲೈ 6ರಂದು ನೇಮಕ ಮಾಡಿತ್ತು.