ನವದೆಹಲಿ: ಪ್ರತಿದಿನ 24 ಸಾವಿರ ಕ್ಯೂಸೆಕ್ ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಆದೇಶಿಸಬೇಕು ಎಂದು ಆಗ್ರಹಿಸಿ ತಮಿಳುನಾಡು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಕರ್ನಾಟಕ ಇಲ್ಲಿಯವರೆಗೂ ಬಿಡುಗಡೆ ಮಾಡಿರುವ ನೀರಿನ ಪ್ರಮಾಣದ ವರದಿಯನ್ನು ಸಲ್ಲಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ(CMWA) ಬಿ.ಆರ್.
ವರದಿ ಸಲ್ಲಿಸಿ
ನಾವು ಈ ವಿಚಾರವಾಗಿ ಹೆಚ್ಚಿನ ಪರಿಣಿತಿಯನ್ನು ಹೊಂದಿಲ್ಲದ ಕಾರಣ ಮುಂದಿನ 15 ದಿನಗಳ ಕಾಲ ನೀರು ಹರಿಸಬೇಕಾಗಿರುವ ಕುರಿತು ಪ್ರಾಧಿಕಾರ ನಿರ್ಧರಿಸುತ್ತದೆ. ಸೋಮವಾರ ಈ ಸಂಬಂಧ ಸಭೆ ಕರೆಯಲಾಗಿದ್ದು, ಆ ನಂತರ ವರದಿ ಸಲ್ಲಿಸಲಾಗುವುದು ಎಂದು ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ನೀರು ಹರಿಸುವ ವಿಚಾರವಾಗಿ ಕರ್ನಾಟಕ ಸರ್ಕಾರಕ್ಕೆ ನೀಡಿರುವ ನಿರ್ದೇಶನಗಳನ್ನು ಪಾಲಿಸಲಾಗಿದೆಯೇ ಇಲ್ಲವೇ ಎಂಬುದರ ಕುರಿತು ಪ್ರಾಧಿಕಾರ ತನ್ನ ವರದಿ ಸಲ್ಲಿಸುವುದು ಸೂಕ್ತ. ಮುಂದಿನ ಶುಕ್ರವಾರದೊಳಗೆ ಪ್ರಾಧಿಕಾರವು ತನ್ನ ವರದಿಯನ್ನು ಸಲ್ಲಿಸಬೇಕು ಎಂದು ತ್ರಿಸದಸ್ಯ ಪೀಠ ಸೂಚಿಸಿದೆ.
ಈ ವರ್ಷ ಉತ್ತಮ ಮಳೆಯಾಗಿದ್ದು, ನೀರಿಗೆ ಯಾವುದೇ ರೀತಿಯ ಸಂಕಷ್ಟವಿಲ್ಲ ಎಂದು ತಮಿಳುನಾಡು ಪರ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದ ಮಂಡಿಸಿದ್ದಾರೆ. ಹಾಗಾಗಿ ಪ್ರತಿದಿನ 24 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡುವಂತೆ ಕರ್ನಾಟಕ ಸರ್ಕಾರಕ್ಕೆ ಆದೇಶಿಬೇಕು ಎಂದು ತ್ರಿಸದಸ್ಯ ಪೀಠದ ಮುಂಭಾಗ ಆಗ್ರಹಿಸಿದ್ದಾರೆ.
ಕರ್ನಾಟಕ ಪರ ವಾದ ಮಂಡಿಸಿದ ಹಿರಿಯ ವಕೀಲ ಶ್ಯಾಮ್ ದಿವಾನ್ ಆಗಸ್ಟ್ 12ರಿಂದ ಅನ್ವಯವಾಗುವಂತೆ ಮುಂದಿನ 15 ದಿನಗಳ ಕಾಲ ಪ್ರತಿದಿನ 10 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ CMWA ತೆಗೆದುಕಕೊಂಡಿರುವ ನಿರ್ಧಾರವನ್ನು ಪರಿಶೀಲಿಸುವಂತೆ ಕೋರಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ವಾದ-ಪ್ರತಿವಾದವನ್ನು ಸುದೀರ್ಘವಾಗಿ ಆಲಿಸಿದ ನ್ಯಾಯಾಲಯವು ಪ್ರತಿನಿತ್ಯ 24 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ತಮಿಳುನಾಡು ಸರ್ಕಾರ ಕರ್ನಾಟಕಕ್ಕೆ ಕೇಳುತ್ತಿರುವುದು ಸರಿಯಲ್ಲ ಎಂದು ಹೇಳಿ ಸುಪ್ರೀಂ ಕೋರ್ಟ್ ಅರ್ಜಿಯನ್ನು ನಿರಾಕರಿಸಿದೆ.