ಇಂಫಾಲ್: ಮಣಿಪುರದಲ್ಲಿ ಪರಸ್ಪರ ಕಾದಾಡುತ್ತಿರುವ ಕುಕಿ ಮತ್ತು ಮೈತೇಯಿ ಸಮುದಾಯಗಳ ಜೊತೆಗೆ ಮಾತುಕತೆ ಆರಂಭಿಸುವುದಕ್ಕೂ ಮುನ್ನ ಸರ್ಕಾರವು ನಿಶಸ್ತ್ರೀಕರಣ ಖಾತರಿಪಡಿಸಿಕೊಳ್ಳಬೇಕು ಎಂದು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಭಾನುವಾರ ಹೇಳಿದ್ದಾರೆ.

ಮಣಿಪುರ ಪ್ರೆಸ್‌ಕ್ಲಬ್‌ನಲ್ಲಿ ಮಾತನಾಡಿದ ಅವರು, ಮೂರು ತಿಂಗಳುಗಳಿಂದ ತಲೆದೋರಿರುವ ಬಿಕ್ಕಟ್ಟನ್ನು ಪರಿಹರಿಸಲು ಬಿಜೆಪಿಯ 'ಡಬಲ್ ಎಂಜಿನ್' ಸರ್ಕಾರವು ತನ್ನ ಪ್ರಯತ್ನವನ್ನು ದ್ವಿಗುಣಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಬಿಕ್ಕಟ್ಟು ಪರಿಹಾರಕ್ಕೆ ಮಾತುಕತೆ ನಡೆಯಬೇಕು. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜವಾಬ್ದಾರಿ. ಕಳೆದ 75 ವರ್ಷಗಳಿಂದ ದೇಶದಲ್ಲಿ ತಲೆದೋರಿದ್ದ ಸಮಸ್ಯೆಗಳಿಗೆ ಮಾತುಕತೆಯ ಮಾಲಕ ಪರಿಹಾರ ಕಂಡುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಮಾತುಕತೆಯು ಕದನ ವಿರಾಮದೊಂದಿಗೆ ಆರಂಭವಾಗಬೇಕು ಮತ್ತು ನಂತರ ಅದು ಸಮಸ್ಯೆಗಳ ಬಗ್ಗೆ ಚರ್ಚಿಸಬೇಕು ಎಂದಿದ್ದಾರೆ.
ಮಣಿಪುರಕ್ಕೆ ಸಂಸದೀಯ ನಿಯೋಗವನ್ನು ಕಳುಹಿಸಬೇಕು ಎಂದು ಯೆಚೂರಿ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಮೇ 3ರಿಂದ ಹಿಂಸಾಚಾರ ನಡೆಯುತ್ತಿದ್ದರೂ ಅದನ್ನು ಹತ್ತಿಕ್ಕುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ ಎಂದು ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ಎಲ್ಲಾ ಪಕ್ಷಗಳ ನಿಯೋಗವನ್ನು ಮಣಿಪುರಕ್ಕೆ ಕಳುಹಿಸಬೇಕು ಮತ್ತು ರಾಜ್ಯದಲ್ಲಿ ವಿರೋಧ ಪಕ್ಷಗಳ ಸಭೆ ಕರೆಯಬೇಕು ಎಂದು ನಾವು ಪದೇ ಪದೇ ಒತ್ತಾಯಿಸುತ್ತಿದೇವೆ ಎಂದಿರುವ ಅವರು, ಪರಿಹಾರ ಶಿಬಿರಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಇದೆ ಎಂದೂ ಆರೋಪಿಸಿದ್ದಾರೆ.