ಕೊಚ್ಚಿ: 2022ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ರದ್ದು ಕೋರಿ ಸಲ್ಲಿಸಲಾಗಿರುವ ಅರ್ಜಿಯ ಕುರಿತು ಸರ್ಕಾರದಿಂದ ಹೈಕೋರ್ಟ್ ವಿವರಣೆ ಕೇಳಿದೆ.
ಸಂಸ್ಕøತಿ ಇಲಾಖೆ ನಿರ್ದೇಶಕರನ್ನೂ ಕಕ್ಷಿದಾರರನ್ನಾಗಿ ಸೇರಿಸುವಂತೆ ಕೋರ್ಟ್ ಸೂಚಿಸಿದೆ. ಶುಕ್ರವಾರ ಮತ್ತೆ ಅರ್ಜಿ ವಿಚಾರಣೆ ನಡೆಯಲಿದೆ. ಅಷ್ಟರೊಳಗೆ ಸರ್ಕಾರ ಉತ್ತರ ನೀಡಬೇಕು.
ಆಕಾಶತ್ತಿನ್ ತಾಳೆ ಚಿತ್ರದ ನಿರ್ದೇಶಕ ಲಿಜೀಶ್ ಮುಲ್ಲರ್ಜಾತ್ ಅವರು ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಪ್ರಶಸ್ತಿ ನಿರ್ಧಾರದಲ್ಲಿ ತೀರ್ಪುಗಾರರ ಅಧ್ಯಕ್ಷರು ಹಸ್ತಕ್ಷೇಪ ಮಾಡಿದ್ದಾರೆ ಎಂದು ಲಿಜೀಶ್ ಅರ್ಜಿಯಲ್ಲಿ ಪ್ರಸ್ತಾಪಿಸಿದ್ದಾರೆ.
ತನಿಖೆಗೆ ಆಗ್ರಹಿಸಿ ಈ ಹಿಂದೆ ಪೋಲೀಸರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದಿರುವ ಹಿನ್ನೆಲೆಯಲ್ಲಿ ತನಿಖೆ ನಡೆಸುವಂತೆ ರಾಜ್ಯ ಪೋಲೀಸ್ ಮುಖ್ಯಸ್ಥರಿಗೆ ಸೂಚಿಸುವಂತೆ ಮನವಿಯಲ್ಲಿ ಕೋರಲಾಗಿದೆ. ಈ ಅರ್ಜಿಯನ್ನು ನ್ಯಾಯಮೂರ್ತಿ ಪಿವಿ ಕುಂಞÂ ಕೃಷ್ಣನ್ ನೇತೃತ್ವದ ಪೀಠ ವಿಚಾರಣೆ ನಡೆಸಿತು.