ಕೊಚ್ಚಿ: ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ಸಿದ್ಧಿಕಿ ಅವರಿಗೆ ಹೃದಯಾಘಾತವಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಕೊಚ್ಚಿ: ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ಸಿದ್ಧಿಕಿ ಅವರಿಗೆ ಹೃದಯಾಘಾತವಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಸಿದ್ಧಿಕಿ ಅವರಿಗೆ ಸೋಮವಾರ (ಆಗಸ್ಟ್ 7ರ) ಮಧ್ಯಾಹ್ನ 3ರ ಸುಮಾರಿಗೆ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಕೊಚ್ಚಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಿದ್ಧಿಕಿ ಅವರು ನ್ಯುಮೋನಿಯಾ ಮತ್ತು ಲಿವರ್‌ಗೆ ಸಂಬಂಧಿಸಿದ ಖಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದರು. ಇದರ ನಡುವೆ ಹೃದಯಾಘಾತವಾಗಿರುವುದರಿಂದ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
1986ರಲ್ಲಿ ತೆರೆಕಂಡ 'ಪಪ್ಪನ್ ಪ್ರಿಯಪ್ಪೆತ್ತ ಪಪ್ಪನ್' ಸಿನಿಮಾಗೆ ಚಿತ್ರಕತೆ ಬರೆಯುವುದರೊಂದಿಗೆ ಸಿನಿ ಪಯಣ ಆರಂಭಿಸಿದ ಸಿದ್ಧಿಕಿ, 1989ರಲ್ಲಿ ಬಿಡುಗಡೆಯಾದ 'ರಾಮ್‌ಜಿ ರಾವ್ ಸ್ಪೀಕಿಂಗ್' ಸಿನಿಮಾ ಮೂಲಕ ನಿರ್ದೇಶಕರಾದರು. ಅವರು ನಿರ್ದೇಶನ ಮಾಡಿರುವ ಕೊನೇ ಸಿನಿಮಾ 'ಬಿಗ್ ಬ್ರದರ್' 2020ರಲ್ಲಿ ಬಿಡುಗಡೆಯಾಗಿದೆ. ಮಲಯಾಳಂ ಮಾತ್ರವಲ್ಲದೆ ತಮಿಳು, ಹಿಂದಿಯಲ್ಲೂ ಸಿನಿಮಾ ನಿರ್ದೇಶಿಸಿದ ಖ್ಯಾತಿ ಅವರದ್ದು.