ಕಾಸರಗೋಡು: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಕೆ.ಇಂಪಾಶೇಖರ್ ಧ್ವಜಾರೋಹಣ ನೆರವೇರಿಸಿದರು. ಸಹಾಯಕ ಜಿಲ್ಲಾಧಿಕಾರಿ ದಿಲೀಪ್ ಕೆ.ಕೈನಿಕರ, ಹೆಚ್ಚುವರಿ ಜಿಲ್ಲಾಧಿಕಾರಿ ನವೀನ್ ಬಾಬು, ಜಿಲ್ಲಾ ಉದ್ಯೋಗಾಧಿಕಾರಿ ಅಜಿತ್ ಜಾನ್, ಸಹಾಯಕ ಜಿಲ್ಲಾಧಿಕಾರಿ(ಎಲ್‍ಆರ್) ಜೆಗ್ಗಿ ಪೌಲ್, ಜಿಲ್ಲಾ ಕಾನೂನು ಅಧಿಕಾರಿ ಮುಹಮ್ಮದ್ ಕುಞÂ ಹಾಗೂ ಜಿಲ್ಲಾಧಿಕಾರಿ ಕಚೇರಿ ನೌಕರರು ಭಾಗವಹಿಸಿದ್ದರು. ಇದೇ ಸಂದರ್ಭ ಆಟೋಮೊಬೈಲ್ ವರ್ಕ್ ಶಾಪ್ ಅಸೋಸಿಯೇಶನ್ ಕಾಸರಗೋಡು ಘಟಕದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಚೀಕರಣ ಕಾರ್ಯ ಕ್ರೈಗೊಂಡರು.