ಮಂಜೇಶ್ವರ: ಮೀಯಪದವು ವಿದ್ಯಾವರ್ಧಕ ಎ. ಯು.ಪಿ ಶಾಲೆಯಲ್ಲಿ ಓಣಂ ಹಬ್ಬವನ್ನು ಶುಕ್ರವಾರ ಆಚರಿಸಲಾಯಿತು. ಶಾಲಾ ಆಡಳಿತ ಸಲಹೆಗಾರ ಶ್ರೀಧರ್ ರಾವ್ ಆರ್.ಎಂ ದೀಪ ಬೆಳಗಿಸಿ ಚಾಲನೆ ನೀಡಿದರು. ಶಾಲಾ ಸಭಾಂಗಣದಲ್ಲಿ ಪೂಕಳಂ ರಚಿಸಲಾಯಿತು. ಬಳಿಕ ವಿದ್ಯಾರ್ಥಿಗಳಿಗೆ ಹಾಗೂ ಅಧ್ಯಾಪಕರಿಗೆ ಹಲವು ಆಟೋಟ ಸ್ಪರ್ಧೆಗಳು ಜರಗಿದವು. ಮಧ್ಯಾಹ್ನ ಓಣಂ ಸದ್ಯ ವಿತರಿಸಲಾಯಿತು. ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು. ಇದೇ ಸಂದರ್ಭದಲ್ಲಿ ಶಾಲಾ ಹಳೆ ವಿದ್ಯಾರ್ಥಿಗಳಿಂದ ಹುಲಿವೇಷ ಕುಣಿತ ಪ್ರದರ್ಶಿಸಲ್ಪಟ್ಟಿತು.