ಮುಳ್ಳೇರಿಯ: ಬೆಳ್ಳೂರು ಸರಕಾರಿ ಪ್ರೌಢಶಾಲೆಯಲ್ಲಿ 77ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ನಡೆದ ಸಮಾರಂಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ವಾರಿಜಾ ನೇರೋಳು ಧ್ವಜಾರೋಹಣ ನೆರವೇರಿಸಿದರು. ವಾರ್ಡ್ ಮೆಂಬರ್ ಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಎಸ್‍ಎಂಸಿ ಅಧ್ಯಕ್ಷ ಅಶ್ರಫ್ ಹಾಗೂ ಹೈಯರ್ ಸೆಕೆಂಡರಿ ವಿಭಾಗದ ಹಿರಿಯ ಅಧ್ಯಾಪಿಕೆ ಯಮುನಾ ಉಪಸ್ಥಿತರಿದ್ದರು. ಈ ಸಂದರ್ಭ ಕಳೆದ ಶೈಕ್ಷಣಿಕ ವರ್ಷದ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ ಅಭಿತ್ ಆರ್. ಹಾಗೂ ಯುಎಸ್ಸೆಸ್ ಪರೀಕ್ಷೆಯಲ್ಲಿ ಉತ್ತೀರ್ಣಳಾದ ಹವ್ವಾ ನುಬ್ಲಾ ಅವರನ್ನು ಅಭಿನಂದಿಸಲಾಯಿತು. ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ,ಭಾಷಣ ಸೇರಿದಂತೆ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ಜರುಗಿತು. ಎಳೆಯ ಮಕ್ಕಳು ಸ್ವಾತಂತ್ರ್ಯ ಹೋರಾಟಗಾರರ ಧಿರಿಸಿನೊಂದಿಗೆ ಗಮನಸೆಳೆದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಪಿ.ಟಿ.ಎ ಅಧ್ಯಕ್ಷರಾದ ಬಶೀರ್ ಮರಿಯಂಗೋಡ್ ಸ್ವಾಗತಿಸಿದರು. ಸ್ಟಾಫ್ ಸೆಕ್ರಟರಿ ದಾಸಪ್ಪ ಮಾಸ್ಟರ್ ಕಾರ್ಯಕ್ರಮ ನಿರ್ವಹಿಸಿದರು. ಸೀನಿಯರ್ ಅಸಿಸ್ಟೆಂಟ್ ದಿವ್ಯಗಂಗಾ ವಂದಿಸಿದರು.