ನವದೆಹಲಿ: ಹಿಂದುಳಿದ ವರ್ಗಗಳ ಕೋಟಾದಲ್ಲಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮುಸ್ಲಿಮರಿಗೆ ನೀಡಿದ್ದ ಶೇ 4ರಷ್ಟು ಮೀಸಲಾತಿಯನ್ನು ಕರ್ನಾಟಕ ಸರ್ಕಾರ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಮುಂದೂಡಿದೆ.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ಎಸ್‌ವಿಎನ್ ಭಟ್ಟಿ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠದಲ್ಲಿ ಅರ್ಜಿಯ ವಿಚಾರಣೆ ನಿಗದಿಯಾಗಿತ್ತು. ವಿಚಾರಣೆ ಮುಂದೂಡಬೇಕು ಎಂದು ಅರ್ಜಿದಾರರು ಹಾಗೂ ಕರ್ನಾಟಕ ಸರ್ಕಾರದ ವಕೀಲರು ಮನವಿ ಮಾಡಿದರು. ಬಳಿಕ ವಿಚಾರಣೆಯನ್ನು ನಾಲ್ಕು ವಾರ ಮುಂದೂಡಲಾಯಿತು.
ಮುಸ್ಲಿಮರ ಶೇ 4ರಷ್ಟು ಮೀಸಲಾತಿ ಹಿಂಪಡೆದ ಕರ್ನಾಟಕ ಸರ್ಕಾರದ ಮಾರ್ಚ್ 27ರ ಆದೇಶ ಪ್ರಶ್ನಿಸಿ ಎಲ್. ಗುಲಾಮ್ ರಸೂಲ್ ಮತ್ತು ಇತರರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. 'ಮುಸ್ಲಿಮರನ್ನು ಒಬಿಸಿ ಪಟ್ಟಿಯಿಂದ ಕೈಬಿಟ್ಟಿರುವುದು ಕಾನೂನುಬಾಹಿರ ಮತ್ತು ಆರ್ಥಿಕವಾಗಿ ದುರ್ಬಲ ವರ್ಗದ ಪಟ್ಟಿಗೆ ಸೇರಿಸಿರುವುದು ಕೂಡ ಕಾನೂನಿಗೆ ವಿರುದ್ಧ' ಎಂದು ಅರ್ಜಿದಾರರು ದೂರಿದ್ದರು.