ಬದಿಯಡ್ಕ: ಬದಿಯಡ್ಕ ಪಂಚಾಯತಿ ಬಂಟ್ಸ್ ಸರ್ವಿಸ್ ಸೊಸೈಟಿಯ ಕಾರ್ಯಕಾರಿ ಸಭೆ ಬದಿಯಡ್ಕದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ನಿರಂಜನ ರೈ ಪೆರಡಾಲ ಅಧ್ಯಕ್ಷತೆ ವಹಿಸಿದ್ದರು. ಕಂಬಳೆ ಪಿರ್ಕಾ ಕಾರ್ಯದರ್ಶಿ ಅಶೋಕ್ ರೈ ಕೊರೆÀಕ್ಕಾನ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ನೀಡಿದರು, ಜೊತೆ ಕಾರ್ಯದರ್ಶಿ ರವೀಂದ್ರನಾಥ ಶೆಟ್ಟಿ ವಳಮಲೆ ಶುಭಹಾರೈಸಿದರು, ಸದ್ಯಸರು ಉಪಸ್ಥಿತರಿದ್ದರು. ಸಭೆಯಲ್ಲಿ ಕೋಶಾಧಿಕಾರಿ ದಯಾನಂದ ರೈ ಬಂಟರ ಸಮ್ಮಿಲನ 2023 ರ ಲೆಕ್ಕಪತ್ರ ಮಂಡಿಸಿದರು. ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಸಂತೋμï ಶೆಟ್ಟಿ ವಂದಿಸಿದರು.
ಜಿಲ್ಲಾ ಸಂಘದ ವಿದ್ಯಾರ್ಥಿ ವೇತನ 2023-24
ಜಿಲ್ಲಾ ಸಮಿತಿ ತೀರ್ಮಾನದಂತೆ ಹಿಂದಿನ ವರ್ಷಗಳಲ್ಲಿ ಈ ವರ್ಷವೂ ಬಂಟರ ಸಂಘದ ವತಿಯಿಂದ ಪದವಿಪೂರ್ವ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿ ವೇತನ ನೀಡಲಾಗುವುದು. ಕಳೆದ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲಿ ಬಿ ಗ್ರೇಡ್ ಅಥವಾ ಅದಕ್ಕಿಂತ ಹೆಚ್ಚಿನ ಗ್ರೇಡ್ ಪಡೆದವರು ಮಾತ್ರ ವಿದ್ಯಾರ್ಥಿ ವೇತನಕ್ಕೆ ಅರ್ಹರಾಗಿರುತ್ತಾರೆ. ಈ ಪ್ರಥಮ ವರ್ಷದ ಪದವಿ ಪೂರ್ವ ವಿದ್ಯಾಭ್ಯಾಸ ಮುಗಿಸಿರುವ ವಿದ್ಯಾರ್ಥಿಗಳು ಮೊದಲ ವರ್ಷದ ಪರೀಕ್ಷೆಯಲ್ಲಿ 60 ಶೇ ಅಂಕಗಳನ್ನು ಗಳಿಸಿ ಉತ್ತೀರ್ಣರಾಗಿದ್ದರೆ ದ್ವಿತೀಯ ವರ್ಷದ ಪದವಿಪೂರ್ವ ವಿದ್ಯಾರ್ಥಿವೇತನಕ್ಕೆ ಅವರು ಅರ್ಹರಾಗಿರುತ್ತಾರೆ. ಕಾಸರಗೋಡು ಜಿಲ್ಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಕಲಿತು ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕವಿ ನಾಡೋಜ ಕಯ್ಯಾರ ಕಿಞ್ಞಣ್ಣ ರೈ ಪ್ರಶಸ್ತಿ ನೀಡಲಾಗುವುದು.. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿವೇತನ ನೀಡಲಾಗುವುದು.
ಅರ್ಹ ವಿದ್ಯಾರ್ಥಿಗಳಿಂದ ನಿಗದಿತ ಫಾರಂನಲ್ಲಿ ಅರ್ಜಿಗಳನ್ನು ಬಂಟರ ಸಂಘದ ಬದಿಯಡ್ಕ ಪಂಚಾಯತ್ ಬಂಟರ ಸಂಘದ ಅಧ್ಯಕ್ಷ ನಿರಂಜನ ರೈ, ಕಾರ್ಯದರ್ಶಿ ಪ್ರದೀಪ ಕುಮಾರ್ ಶೆಟ್ಟಿ ಬೇಳ ಇವರನ್ನು ಸಂಪರ್ಕಿಸಲು ತಿಳಿಸಲಾಗಿದೆ.