ಹರಿದ್ವಾರ: ಅಯೋಧ್ಯೆಯ ರಾಮಮಂದಿರದ ಗರ್ಭಗುಡಿ ಸಿದ್ಧವಾಗಿದ್ದು, ಮಕರ ಸಂಕ್ರಾಂತಿ ಬಳಿಕ ಜನವರಿ 16 ಮತ್ತು 24ರ ನಡುವೆ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪಿಸಲಾಗುವುದು ಎಂದು ರಾಮ ಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ತಿಳಿಸಿದ್ದಾರೆ.

ಭಾನುವಾರ ಇಲ್ಲಿಗೆ ಭೇಟಿ ನೀಡಿ, ಸಂತರು ಮತ್ತು ಸ್ವಾಮೀಜಿಗಳನ್ನು ಭೇಟಿಯಾಗಿ ದೇವಾಲಯದ ನಿರ್ಮಾಣದ ಪ್ರಗತಿ ಬಗ್ಗೆ ಮಾಹಿತಿ ನೀಡಿದರು. ಅಯೋಧ್ಯೆಯಲ್ಲಿ 10 ದಿನಗಳ ಪ್ರಾಣ ಪ್ರತಿಷ್ಠಾ (ಪ್ರತಿಷ್ಠಾಪನೆ) ಸಮಾರಂಭದಲ್ಲಿ ಭಾಗವಹಿಸುವಂತೆ ಅವರನ್ನು ಆಹ್ವಾನಿಸಿದರು.
ದೇವಾಲಯದ ಮೊದಲ ಮಹಡಿ ನಿರ್ಮಾಣದ ನಂತರ ರಾಮಲಲ್ಲಾ ಪ್ರತಿಷ್ಠಾಪನೆ ನಡೆಯಲಿದೆ. ರಾಮಮಂದಿರದ ಮೊದಲ ಮಹಡಿಯ ಶೇಕಡ 80 ರಷ್ಟು ಕೆಲಸ ಪೂರ್ಣಗೊಂಡಿದೆ. ಭಕ್ತರ ದರ್ಶನದ ನಡುವೆ ನಿರ್ಮಾಣ ಚಟುವಟಿಕೆಗಳು ಮುಂದುವರಿಯುತ್ತವೆ. ಇದರಿಂದ ಯಾವುದೇ ತೊಂದರೆ ಆಗುವುದಿಲ್ಲ ಎಂದು ರೈ ಹೇಳಿದ್ದಾರೆ.