ಮಂಜೇಶ್ವರ: ವಿದ್ಯಾವರ್ಧಕ ಎ. ಯು.ಪಿ ಶಾಲೆ ಮೀಯಪದವಿನಲ್ಲಿ 77ನೇ ವರ್ಷದ ಸ್ವಾತಂತ್ರೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ಸಂಚಾಲಕಿ ರಾಜೇಶ್ವರಿ.ಎಸ್.ರಾವ್ ಧ್ವಜಾರೋಹಣಗೈದರು. ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಿಟಿಎ ಅಧ್ಯಕ್ಷ ಹಮೀದ್ ಮೈತಾಳ್ ವಹಿಸಿ ಶುಭ ಹಾರೈಸಿದರು. ಶಾಲಾ ಆಡಳಿತ ಸಲಹೆಗಾರ ಶ್ರೀಧರ್.ರಾವ್ ಆರ್.ಎಂ ಹಾಗೂ ಶಾಲಾ ಹಿರಿಯ ಅಧ್ಯಾಪಕ ನಾರಾಯಣ.ಯು ಶುಭಹಾರೈಸಿದರು.
ಶಾಲಾ ಸಂಚಾಲಕಿ ರಾಜೇಶ್ವರಿ.ಎಸ್.ರಾವ್ ಹಾಗೂ ಎಂ.ಪಿ.ಟಿ ಎ ಅಧ್ಯಕ್ಷೆ ಸ್ವಪ್ನಾ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜರಗಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಎಲ್.ಪಿ ಎಸ್. ಆರ್.ಜಿ ಕನ್ವಿನರ್ ಪ್ರತಿಭಾಶ್ರೀ.ಕೆ ಬಹುಮಾನ ವಿತರಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ರಂಗೇರಿದವು. ಮುಖ್ಯೋಪಾಧ್ಯಾಯ ಅರವಿಂದಾಕ್ಷ ಭಂಡಾರಿ ಸ್ವಾಗತಿಸಿ, ಶಾಲಾ ನೌಕರ ಸಂಘದ ಕಾರ್ಯದರ್ಶಿ ರಾಧಮಣಿ.ಬಿ ವಂದಿಸಿದರು. ಯು.ಪಿ ಎಸ್.ಆರ್.ಜಿ ಕನ್ವಿನರ್ ರಜನಿ.ಸಿ.ಕೆ ಕಾರ್ಯಕ್ರಮ ನಿರೂಪಿಸಿದರು.