ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಪುತ್ರ, ಸಂಸದ ಶ್ರೀಕಾಂತ್ ಶಿಂದೆ ಮಂಗಳವಾರ ಲೋಕಸಭೆಯಲ್ಲಿ ಹನುಮಾನ್ ಚಾಲೀಸಾ ಪಠಿಸಿದರು.
ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಅವರು, 'ಮಹಾರಾಷ್ಟ್ರದಲ್ಲಿ 2019ರಲ್ಲಿ ಶಿವಸೇನಾ-ಬಿಜೆಪಿ ಮೈತ್ರಿಕೂಟಕ್ಕೆ ಜನರು ಬಹುಮತ ನೀಡಿದ್ದರು.
'ಜನರು ಹನುಮಾನ್ ಚಾಲೀಸಾ ಪಠಿಸುವುದನ್ನು ತಡೆಯಲಾಗುತ್ತಿದೆ. ನನಗೆ ಚಾಲೀಸಾ ಗೊತ್ತಿದೆ' ಎಂದು ಹೇಳಿ ಪಠಿಸಲು ಆರಂಭಿಸಿದರು. ಆಗ 'ಮಾತು ಮುಂದುವರೆಸುವಂತೆ ಸ್ಪೀಕರ್ ಸೂಚಿಸಿದ್ದರಿಂದ ಅರ್ಧಕ್ಕೆ ನಿಲ್ಲಿಸಿದರು.
'2018ರಲ್ಲೂ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಾಗಿತ್ತು. ಆದರೆ ಎನ್‌ಡಿಎ ನೇತೃತ್ವದ ಸರ್ಕಾರ ಪುನಃ ಅಧಿಕಾರಕ್ಕೆ ಬಂದಿತ್ತು. ಈ ಬಾರಿಯೂ ವಿರೋಧ ಪಕ್ಷಗಳು ಅವಿಶ್ವಾಸ ಮಂಡಿಸಿವೆ. ಮುಂದಿನ ಚುನಾವಣೆಯಲ್ಲಿ ಎನ್‌ಡಿಎ 400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.