ಕಾಸರಗೋಡು: ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲಾ ಐಸಿಡಿಎಸ್ ಕೋಶ ಹಾಗೂ ಔಷಧ ಅಭಿಯಾನದ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ವಿಚಾರ ಸಂಕಿರಣ ಕಾಞಂಗಾಡ್ ರಾಜ್ ರೆಸಿಡೆನ್ಸಿಯಲ್ಲಿ ಜರುಗಿತು. ಕಾಞಂಗಾಡು ನಗರಸಭಾ ಅಧ್ಯಕ್ಷೆ ಕೆ.ವಿ.ಸುಜಾತಾ ಸಮಾರಂಭ ಉದ್ಘಾಟಿಸಿದರು. ಜಿಲ್ಲಾ ಹೆಚ್ಚುವರಿ ದಂಡಾಧಿಕಾರಿ ಪಿ.ವಿ.ನವೀನ್ ಬಾಬು ಅಧ್ಯಕ್ಷತೆ ವಹಿಸಿದ್ದರು. ಸ್ತನ್ಯಪಾನದ ಪ್ರಾಮುಖ್ಯತೆ ಕುರಿತು ಡಾ.ಬಿಪಿನ್ ಕೆ.ನಾಯರ್ ಮತ್ತು ಡಾ.ಜಿ.ಕೆ.ಸೀಮಾ ತರಗತಿ ನಡೆಸಿದರು. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ವಿ.ಎಸ್.ಶಿಮ್ನಾ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪಿ.ಶ್ರೀಜಾ ಮತ್ತು ಲತಿಕಾ ಉಪಸ್ಥಿತರಿದ್ದರು. ಜಿಲ್ಲಾ ಐಸಿಡಿಎಸ್ ಕಾರ್ಯನಿರ್ವಹಣಾಧಿಕಾರಿ ಸಿ.ಸುಧಾ ಸ್ವಾಗತಿಸಿದರು. ಮೇಲ್ವಿಚಾರಕ ವಿ.ಕೆ.ಅಮರನಾಥ ಭಾಸ್ಕರ್ ವಂದಿಸಿದರು. ಜಿಲ್ಲೆಯ ಐ.ಸಿ.ಡಿ.ಎಸ್‍ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಕುಟುಂಬಶ್ರೀ ಸೇರಿದಂತೆ ಇತರೆ ಇಲಾಖೆ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.