ನಾಗಪುರ: ಧಾರಾಕಾರ ಮಳೆಯಿಂದಾಗಿ ನಗರದ ಹಲವು ಪ್ರದೇಶಗಳು ಶನಿವಾರ ಜಲಾವೃತವಾಗಿವೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹೇಳಿದ್ದಾರೆ.
ನಾಗಪುರ: ಧಾರಾಕಾರ ಮಳೆಯಿಂದಾಗಿ ನಗರದ ಹಲವು ಪ್ರದೇಶಗಳು ಶನಿವಾರ ಜಲಾವೃತವಾಗಿವೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹೇಳಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ರಕ್ಷಣಾ ಕಾರ್ಯಚಾರಣೆಯಲ್ಲಿ ತೊಡಗಿವೆ.
ವಾಕ್ ಮತ್ತು ಶ್ರವಣ ದೋಷವುಳ್ಳ 40 ವಿದ್ಯಾರ್ಥಿಗಳು ಸೇರಿದಂತೆ 180 ಜರನ್ನು ರಕ್ಷಿಸಲಾಗಿದೆ ಎಂದು ಫಡಣವೀಸ್ ತಿಳಿಸಿದ್ದಾರೆ.
ನಗರದಲ್ಲಿ ಶುಕ್ರವಾರ ರಾತ್ರಿ ಭಾರಿ ಮಳೆ ಸುರಿದಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ನಾಗಪುರ ವಿಮಾನ ನಿಲ್ದಾಣದಲ್ಲಿ ಇಂದು (ಶನಿವಾರ) ಬೆಳಗ್ಗೆ 5.30ರ ವರೆಗೆ 10.6 ಸೆಂ.ಮೀ. ಮಳೆ ಸುರಿದಿದೆ. ಹಲವು ರಸ್ತೆಗಳು, ವಸತಿ ಪ್ರದೇಶಗಳು ಮುಳುಗಡೆಯಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮುನ್ನೆಚ್ಚರಿಕೆಯ ದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ನಾಗಪುರ ಶಾಸಕರೂ ಆಗಿರುವ ಫಡಣವೀಸ್ ಅವರು, ಮಳೆ ಪರಿಸ್ಥಿತಿಯ ಬಗ್ಗೆ ನಿರಂತರವಾಗಿ ಅವಲೋಕನ ನಡೆಸುತ್ತಿರುವುದಾಗಿ ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಬರೆದುಕೊಂಡಿದ್ದಾರೆ.