ತಿರುವನಂತಪುರಂ: ವಿದ್ಯುನ್ಮಾನ ಮತಯಂತ್ರಗಳು ಮತ್ತು ವಿವಿಪ್ಯಾಟ್ ಯಂತ್ರಗಳ ಪ್ರಾಥಮಿಕ ಹಂತದ ಪರಿಶೀಲನೆ ಕುರಿತು ರಾಜ್ಯದ ಕಲೆಕ್ಟರ್‍ಗಳು ಮತ್ತು ಚುನಾವಣಾ ಡೆಪ್ಯುಟಿ ಕಲೆಕ್ಟರ್‍ಗಳಿಗೆ ಒಂದು ದಿನದ ಕಾರ್ಯಾಗಾರವನ್ನು ಶನಿವಾರ ಆಯೋಜಿಸಲಾಗಿದೆ.
ಕಾರ್ಯಾಗಾರವು ತ್ರಿಶೂರ್‍ನ ಪೀಚೆಯಲ್ಲಿರುವ ಅರಣ್ಯ ಸಂಶೋಧನಾ ಸಂಸ್ಥೆಯಲ್ಲಿ ನಡೆಯಲಿದೆ.
ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜಯ್ ಕೌಲ್, ಲಕ್ಷದ್ವೀಪ ಮುಖ್ಯ ಚುನಾವಣಾಧಿಕಾರಿ, ಇವಿಎಂ ನೋಡಲ್ ಅಧಿಕಾರಿ ಮೊದಲಾದವರು ಭಾಗವಹಿಸಲಿದ್ದಾರೆ. 18ರಿಂದ ಮತಯಂತ್ರಗಳ ಪ್ರಾಥಮಿಕ ತಪಾಸಣೆ ಆರಂಭವಾಗಲಿದೆ.
ಸಾರ್ವತ್ರಿಕ ಚುನಾವಣೆಗೆ ಆರು ತಿಂಗಳ ಮೊದಲು ವಿದ್ಯುನ್ಮಾನ ಮತಯಂತ್ರಗಳು ಮತ್ತು ವಿವಿ ಪ್ಯಾಟ್ ಯಂತ್ರಗಳ ಪ್ರಾಥಮಿಕ ತಪಾಸಣೆ ನಡೆಸಬೇಕು ಎಂದು ಕೇಂದ್ರ ಚುನಾವಣಾ ಆಯೋಗ ನಿರ್ದೇಶನದ ಹಿನ್ನೆಲೆಯಲ್ಲಿ ಈ ಕಾರ್ಯಾಗಾರ ಸಂಘಟಿಸಲಾಗಿದೆ.