ನವದೆಹಲಿ: ಹೊಸ ಸಂಸತ್ ಭವನದಲ್ಲಿ ಅಧಿವೇಶನ ನಡೆಸಲು ದಿನಗಣನೆ ಆರಂಭವಾಗಿದೆ.
ಐದು ದಿನಗಳ ವಿಶೇಷ ಅಧಿವೇಶನ ಸೆ. 18ರಿಂದ ಪ್ರಾರಂಭವಾಗಲಿದೆ. ಯಾವ ಉದ್ದೇಶಕ್ಕಾಗಿ ವಿಶೇಷ ಅಧಿವೇಶನವನ್ನು ಕರೆಯಲಾಗುತ್ತಿದೆ ಎಂಬುದು ಇನ್ನಷ್ಟೇ ಬಹಿರಂಗವಾಗಬೇಕಿದೆ.
ಸೋನಿಯಾ ಕಿಡಿ: ವಿರೋಧ ಪಕ್ಷಗಳಿಗೆ ಮಾಹಿತಿ ನೀಡದೆಯೇ ವಿಶೇಷ ಅಧಿವೇಶನ ಕರೆಯಲಾಗಿದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ದೂರಿದ್ದು, ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
'ಬೇರೆ ಯಾವುದೇ ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡದೆಯೇ ವಿಶೇಷ ಅಧಿವೇಶನ ಕರೆಯಲಾಗಿದೆ. ಅಜೆಂಡಾ ಏನು ಎನ್ನುವುದರ ಬಗ್ಗೆ ಯಾರಿಗೂ ಮಾಹಿತಿ ಇಲ್ಲ. ಸರ್ಕಾರದ ವಿಷಯ ಸಂಬಂಧ 5 ದಿನಗಳನ್ನು ನಿಗದಿಪಡಿಸಲಾಗಿದೆ ಎಂದಷ್ಟೇ ನಮಗೆ ತಿಳಿಸಲಾಗಿದೆ' ಎಂದು ಸೋನಿಯಾ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.