HEALTH TIPS

ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆ ಕಕ್ಷೆಗೆ ಏರಿಸುವ ಮೊದಲ ಪ್ರಕ್ರಿಯೆ ಯಶಸ್ವಿ

              ಬೆಂಗಳೂರು: ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆಯನ್ನು ಕಕ್ಷೆಗೆ ಏರಿಸುವ ಮೊದಲ ಹಂತದ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ತಿಳಿಸಿದೆ.



              ಮೈಕ್ರೋ ಬ್ಲಾಗಿಂಗ್ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಮಾಹಿತಿ ನೀಡಿದೆ.

ಈ ಪ್ರಕ್ರಿಯೆಯನ್ನು ಬೆಂಗಳೂರಿನಲ್ಲಿರುವ ಟೆಲಿಮೆಟ್ರಿ, ಟ್ರ್ಯಾಂಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್ (ಐಎಸ್‌ಟಿಆರ್‌ಎಸಿ) ಕೇಂದ್ರದಿಂದ ಯಶಸ್ವಿಯಾಗಿ ನಿರ್ವಹಿಸಲಾಗಿದೆ.

                  ಬಾಹ್ಯಾಕಾಶ ನೌಕೆ ಸುಸ್ಥಿತಿಯಲ್ಲಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದೆ.

          ಬಾಹ್ಯಾಕಾಶ ನೌಕೆ ಈಗ 245 ಕಿ.ಮೀ x 22459 ಕಿ.ಮೀ. ಕಕ್ಷೆ ತಲುಪಿದೆ. ಮುಂದಿನ ಹಂತದ ಕಕ್ಷೆ ಬದಲಾವಣೆ ಸೆಪ್ಟೆಂಬರ್ 05, ಮಂಗಳವಾರ 3 ಗಂಟೆಗೆ ನಿಗದಿಯಾಗಿದೆ.

             ಸೂರ್ಯನ ಅಧ್ಯಯನದ ಉದ್ದೇಶದ ಭಾರತದ ಮಹತ್ವಾಕಾಂಕ್ಷೆಯ ಆದಿತ್ಯ ಎಲ್‌1 ವೀಕ್ಷಣಾಲಯವನ್ನು ಹೊತ್ತ ಪಿಎಸ್‌ಎಲ್‌ವಿ ರಾಕೆಟ್‌ ಅನ್ನು ಶ್ರೀಹರಿಕೋಟದ ಉಡಾವಣಾ ಕೇಂದ್ರದಿಂದ ಶನಿವಾರ ಯಶಸ್ವಿಯಾಗಿ ಉಡ್ಡಯನ ಮಾಡಲಾಗಿತ್ತು.

               ಭೂಮಿಯಿಂದ 15 ಲಕ್ಷ ಕಿ.ಮೀ ದೂರದಲ್ಲಿರುವ ಲಗ್ರಾಂಜಿಯನ್ ಬಿಂದುವಿನಲ್ಲಿ ಆದಿತ್ಯ ಎಲ್‌-1 ಅಂತರಿಕ್ಷ ವೀಕ್ಷಣಾಲಯವನ್ನುಇರಿಸಲಾಗುವುದು. 125 ದಿನಗಳಲ್ಲಿ ಎಲ್‌-1 ಬಿಂದುವಿಗೆ ಸೇರಿಸಲಾಗುತ್ತದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries