ಮುಂಬೈ: 2047ರ ವೇಳೆಗೆ ಭಾರತ ಅಭಿವೃದ್ದಿ ಹೊಂದಿದ ರಾಷ್ಟ್ರವಾಗುವುದರಲ್ಲಿ ಬಾಲಿವುಡ್ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಗಾಯಕ ಕೈಲಾಶ್ ಖೇರ್ ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟಿರುವ ಅಮೃತಕಾಲ ಯೋಜನೆ ಕುರಿತು ಮಾತನಾಡುವ ವೇಳೆ ಹೇಳಿದ್ದಾರೆ.

ಖಾಸಗಿ ಸುದ್ದಿಸಂಸ್ಥೆಯೊಂದರ ಸಂದರ್ಶನದಲ್ಲಿ ಮಾತನಾಡಿದ ಕೈಲಾಶ್ ಖೇರ್ ಉತ್ತಮ ವೇಗ ಹೊಂದಿರುವ ಭಾರತೀಯರು ಈಗಾಗಲೇ ದೇಶವನ್ನು ಅಭಿವೃದ್ದಿಯ ಪಥದಲ್ಲಿ ಇರಿಸಿದ್ದಾರೆ. 2047ಕ್ಕೂ ಮುಂಚಿತವಾಗಿಯೇ ಭಾರತ ಅಭಿವೃದ್ದಿ ಹೊಂದಿದ ರಾಷ್ಟ್ರವಾಗಲಿದೆ ಎಂದು ಹೇಳಿದ್ಧಾರೆ.
ಭಾರತದ ಆತಿಥ್ಯದಲ್ಲಿ ನಡೆದ ಜಿ-20 ಶೃಂಗಸಭೆಯ ಯಶಸ್ಸನ್ನು ಉಲ್ಲೇಖಿಸಿ ಮಾತನಾಡಿದ ಕೈಲಾಶ್ ಪ್ರಧಾನಿ ಮೋದಿ ಅವರು ದೇಶದ ಅಭಿವೃದ್ದಿಯ ಹಿತದೃಷ್ಟಿಯಿಂದ ಕರೆ ಕೊಟ್ಟಿರುವ ಅಮೃತಕಾಲ ಯೋಜನೆಗೆ ಸಂಬಂಧಿಸಿದಂತೆ ಬಾಲಿವುಡ್ ಪ್ರಮುಖ ಪಾತ್ರ ವಹಿಸಲಿದೆ. ಇತ್ತೀಚಿನ ವರ್ಷಗಳಲ್ಲಿ ವಿಶ್ವದಲ್ಲಿ ಭಾರತದ ಚಿತ್ರಣವು ಹೆಚ್ಚು ಪ್ರಾಮುಖ್ಯತೆಯನ್ನು ಗಳಿಸಿದ್ದು, 2047ರ ವೇಳೆಗೆ ಭಾರತ ಅಭಿವೃದ್ದಿ ಹೊಂದಿದ ರಾಷ್ಟ್ರವಾಗಲಿದೆ.ಚಿತ್ರೋದ್ಯಮ ರಚನಾತ್ಮಕವಾಗಿದ್ದು, ಸಕಾರಾತ್ಮಕವಾಗಿ ಕೆಲಸ ಮಾಡಬೇಕಾಗಿದೆ. ಕಲೆ ಮತ್ತು ಸಂಸ್ಕೃತಿ ದೇಶದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ವಿಶ್ವದಾದ್ಯಮತ ಪ್ರಧಾನಿ ಮೋದಿ ನಾಯಕತ್ವದಲ್ಲಿ ಭಾರತವು ವಿಶ್ವದಲ್ಲಿ ಹೆಚ್ಚು ಪ್ರಾಮುಖ್ಯತೆಯನ್ನು ಪಡೆದಿದೆ. ಜಿ-20 ಶೃಂಗಸಭೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬ ನಾಯಕರು ಸಹ ಮೋದಿಯ ನಾಯಕತ್ವದಿಂದ ಹೆಚ್ಚು ಪ್ರಭಾವಿತರಾಗಿದ್ದಾರೆ.
ಆಫ್ರಿಕನ್ ಒಕ್ಕೂಟವನ್ನು ಜಿ-20 ಭಾಗವಾಗಿಸಿದ ಕ್ರಮವನ್ನು ಶ್ಲಾಘಿಸಿದ ಕೈಲಾಶ್ ಖೇರ್ ಇದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ವಿಚಾರ ಎಂದು ಪ್ರಧಾನಿ ಮೋದಿ ನಾಯಕತ್ವವನ್ನು ಹಾಡಿ ಹೊಗಳಿದ್ದಾರೆ.