ನವದೆಹಲಿ: ಭಾರತದ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆದ ಜಿ20 ಶೃಂಗಸಭೆಗೆ ಭದ್ರತೆ ಒದಗಿಸಿದ ಪೊಲೀಸ್ ಸಿಬ್ಬಂದಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಔತಣಕೂಟಕ್ಕೆ ಆಹ್ವಾನಿಸಿದ್ದಾರೆ.
ನವದೆಹಲಿ: ಭಾರತದ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆದ ಜಿ20 ಶೃಂಗಸಭೆಗೆ ಭದ್ರತೆ ಒದಗಿಸಿದ ಪೊಲೀಸ್ ಸಿಬ್ಬಂದಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಔತಣಕೂಟಕ್ಕೆ ಆಹ್ವಾನಿಸಿದ್ದಾರೆ.
ಕಾರ್ಯಕ್ರಮದ ವೇಳೆ ಸೂಕ್ತ ಭದ್ರತೆ ಒದಗಿಸಿದ್ದಕ್ಕಾಗಿ ಧನ್ಯವಾದ ಸೂಚಿಸುವ ಉಪಕ್ರಮವಾಗಿ ಶನಿವಾರ ರಾತ್ರಿ ಪೊಲೀಸ್ ಅಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಅವರು ಔತಣಕೂಟ ನಡೆಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತ ಮಂಟಪ ಸೇರಿದಂತೆ ಜಿ20 ಸಭೆ ನಡೆದ ಸ್ಥಳದಲ್ಲಿನ ಎಲ್ಲಾ ಝೋನ್‌ಗಳಲ್ಲಿ ಕಾರ್ಯನಿರ್ವಹಿಸಿದ ಪೊಲೀಸ್ ತಂಡಗಳಿಂದ 5 -6 ಸಿಬ್ಬಂದಿಯನ್ನು ಆಯ್ಕೆ ಮಾಡಿ ಕಳುಹಿಸುವಂತೆ ಸೂಚಿಸಲಾಗಿದೆ.
ವಿಶೇಷವಾಗಿ ವೈಯಕ್ತಿಕ ಅಥವಾ ಕುಟುಂಬದ ತೊಂದರೆಗಳಿದ್ದರೂ ಕರ್ತವ್ಯದಲ್ಲಿ ತೊಡಗಿದ ಅಧಿಕಾರಿಗಳನ್ನು ಔತಣಕೂಟಕ್ಕೆ ಕಳುಹಿಸುವಂತೆ ಹೇಳಲಾಗಿದೆ.
ಇನ್ಸ್‌ಪೆಕ್ಟರ್‌ಗಳಿಂದ ಕಾನ್ಸ್‌ಸ್ಟೇಬಲ್‌ವರೆಗಿನ ಒಟ್ಟು 450 ಪೊಲೀಸರು ಔತಣಕೂಟದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.