ನವದೆಹಲಿ :ಒಂದು ದೇಶ, ಒಂದು ಚುನಾವಣೆ ಕುರಿತು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 23ರಂದು ಮೊದಲ ಸಭೆ ನಡೆಯಲಿದೆ.
ನವದೆಹಲಿ :ಒಂದು ದೇಶ, ಒಂದು ಚುನಾವಣೆ ಕುರಿತು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 23ರಂದು ಮೊದಲ ಸಭೆ ನಡೆಯಲಿದೆ.
ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್, ಲೋಕಸಭಾ ಮತ್ತು ವಿಧಾನಸಭೆ ಎರಡೂ ಚುನಾವಣೆಗಳನ್ನು ಏಕಕಾಲಕ್ಕೆ ನಡೆಸುವ ಸಂಬಂಧ ಒಂದು ದೇಶ, ಒಂದು ಚುನಾವಣೆ ಕುರಿತು ಇದೇ 23ರಂದು ಮೊದಲ ಸಭೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.
ಒಂದು ದೇಶ, ಒಂದು ಚುನಾವಣೆ ಭಾರತದಲ್ಲಿ ಅಗತ್ಯವಾಗಿದೆ: ನರೇಂದ್ರ ಮೋದಿ
'ಲೋಕಸಭೆ ಮತ್ತು ವಿಧಾನಸಭೆಗಳ ಚುನಾವಣೆಗಳನ್ನು ಏಕಕಾಲಕ್ಕೆ ನಡಸುವುದು ವಾಸ್ತವದಲ್ಲಿ ಅತ್ಯಂತ ಕಷ್ಟದ ಕೆಲಸ. ಬೇರೆ ಬೇರೆ ರಾಜ್ಯಗಳ ಚುನಾವಣೆಗಳು ಬೇರೆ ಬೇರೆ ಸಮಯದಲ್ಲಿ ನಡೆಯಲಿವೆ. ಅವುಗಳನ್ನು ಮಧ್ಯಂತರದಲ್ಲಿ ವಿಸರ್ಜಿಸಿ ಚುನಾವಣೆ ನಡೆಸಲು ಆಗದು. ಹೀಗಾಗಿ, ಲೋಕಸಭೆ ಚುನಾವಣೆ ಜತೆ ವಿಧಾನಸಭೆಗಳ ಚುನಾವಣೆ ನಡೆಸುವುದು ಅಸಾಧ್ಯ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು.
'ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಧ್ಯಯನ ನಡೆಸಿ ವರದಿ ಕೊಡಲಿ. ಅದನ್ನು ನೋಡಿ ಪ್ರತಿಕ್ರಿಯಿಸುವೆ' ಎಂದು ಸಿದ್ದರಾಮಯ್ಯ ತಿಳಿಸಿದ್ದರು.