ಲಖನೌ: ಉತ್ತರದ ಪ್ರದೇಶದ ಗಾಜಿಯಾಬಾದ್‌ನಲ್ಲಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಪರಿಣಾಮ 24 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಲಖನೌ: ಉತ್ತರದ ಪ್ರದೇಶದ ಗಾಜಿಯಾಬಾದ್‌ನಲ್ಲಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಪರಿಣಾಮ 24 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಸ್ ಮೀರತ್‌ನಿಂದ ದೆಹಲಿಗೆ ಹೋಗುತ್ತಿದ್ದ ವೇಳೆ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇನಲ್ಲಿ ಈ ಘಟನೆ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.
ಬಸ್ ಸ್ಟೇರಿಂಗ್ ನಿಯಂತ್ರಣ ತಪ್ಪಿದ ಬಗ್ಗೆ ನನಗೆ ತಿಳಿಯಲಿಲ್ಲ ಎಂದು ಚಾಲಕ ಪ್ರದೀಪ್ ಅವರು ಪೊಲೀಸರಿಗೆ ತಿಳಿಸಿದ್ದು, ಚಾಲಕ ಮದ್ಯ ಸೇವನೆ ಮಾಡಿರಲಿಲ್ಲ ಎಂದು ಡಿಸಿಪಿ (ಗ್ರಾಮೀಣ) ವಿವೇಕ್ ಚಂದ್ ಯಾದವ್ ತಿಳಿಸಿದ್ದಾರೆ.
ಅಪಘಾತದಲ್ಲಿ 24 ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಸಂಜಯ್ ನಗರದ ಸರ್ಕಾರಿ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡಿರುವ ಎಲ್ಲಾ ಪ್ರಯಾಣಿಕರು ಬಿಜ್ನೋರ್ ಜಿಲ್ಲೆಯವರಾಗಿದ್ದಾರೆ ಎಂದು ಡಿಸಿಪಿ ಹೇಳಿದ್ದಾರೆ.