HEALTH TIPS

"ಸನಾತನ ಧರ್ಮ ನಿರ್ಮೂಲನೆ" ಹೇಳಿಕೆ: ಉದಯನಿಧಿ ವಿರುದ್ಧ ಕೇಸ್ ದಾಖಲಿಸುವಂತೆ ಸಿಜೆಐಗೆ 262 ಗಣ್ಯರಿಂದ ಪತ್ರ

            ನವದೆಹಲಿ: "ಸನಾತನ ಧರ್ಮ ನಿರ್ಮೂಲನೆ"ಗೆ ಕರೆ ನೀಡಿದ್ದ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಹಾಗೂ ತಮಿಳುನಾಡು ಯುವಜನ ಕಲ್ಯಾಣ ಸಚಿವ ಉದಯನಿಧಿ ಸ್ಟಾಲಿನ್ ಅವರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಮಾಜಿ ನ್ಯಾಯಾಧೀಶರು ಮತ್ತು ಅಧಿಕಾರಿಗಳು ಸೇರಿದಂತೆ 260ಕ್ಕೂ ಹೆಚ್ಚು ಗಣ್ಯರು ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದಾರೆ.

          ದೆಹಲಿ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಎಸ್ ಎನ್ ಧಿಂಗ್ರಾ ಸೇರಿದಂತೆ 262 ಗಣ್ಯರು ಸಿಜೆಐಗೆ ಬರೆದ ಪತ್ರದಲ್ಲಿ ಸಹಿ ಮಾಡಿದ್ದು, ಉದಯನಿಧಿ ಸ್ಟಾಲಿನ್ ದ್ವೇಷಪೂರಿತ ಭಾಷಣ ಮಾಡಿದ್ದು ಮಾತ್ರವಲ್ಲದೆ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಲು ನಿರಾಕರಿಸಿದ್ದಾರೆ   ಎಂದು ಹೇಳಿದ್ದಾರೆ.

                      ಸ್ಟಾಲಿನ್ ಹೇಳಿಕೆ ಬಗ್ಗೆ ಕೆಳಗೆ ಸಹಿ ಮಾಡಲಾದವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಈ ಹೇಳಿಕೆಗಳು ನಿರ್ವಿವಾದವಾಗಿ ಭಾರತದ ಹೆಚ್ಚಿನ ಜನಸಂಖ್ಯೆಯ ವಿರುದ್ಧ "ದ್ವೇಷ ಭಾಷಣ" ಕ್ಕೆ ಸಮನಾಗಿರುತ್ತದೆ. ಹೀಗಾಗಿ ಅವರ ವಿರುದ್ಧ ಸುಮೋಟೋ ಕೇಸ್ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.

                 ದೇಶದ ಜಾತ್ಯತೀತ ಗುಣವನ್ನು ಕಾಪಾಡುವ ನಿಟ್ಟಿನಲ್ಲಿ ಉದಯನಿಧಿ ವಿರುದ್ಧ ಕ್ರಮ ಅಗತ್ಯ ಎಂದು ಪತ್ರದಲ್ಲಿ ತಿಳಿಸಲಾಗಿದೆ.

                  ತಮಿಳುನಾಡು ಸರ್ಕಾರ ಉದಯನಿಧಿ ವಿರುದ್ಧ ಕ್ರಮ ಕೈಗೊಳ್ಳಲು ನಿರಾಕರಿಸಿದೆ ಮತ್ತು ನ್ಯಾಯಾಲಯದ ಆದೇಶಗಳನ್ನು ನಿರ್ಲಕ್ಷಿಸಿದೆ ಮತ್ತು "ಗಂಭೀರವಾಗಿ ದುರ್ಬಲಗೊಳಿಸಿದೆ ಅಥವಾ ಕಾನೂನಿನ ನಿಯಮವನ್ನು ಅಪಹಾಸ್ಯ ಮಾಡಿದೆ" ಎಂದು ಪತ್ರದಲ್ಲಿ ತಿಳಿಸಲಾಗಿದೆ.

                      ಕಳೆದ ಭಾನುವಾರ ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಅವರು ಸನಾತನ ಧರ್ಮವನ್ನು ಕೊರೋನಾವೈರಸ್, ಮಲೇರಿಯಾ ಮತ್ತು ಡೆಂಗ್ಯೂಗೆ ಹೋಲಿಸಿದ್ದಾರೆ ಮತ್ತು ಅಂತಹ ವಿಷಯಗಳನ್ನು ವಿರೋಧಿಸಬಾರದು. ಆದರೆ ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು.


    ಕಾಮೆಂಟ್‌‌ ಪೋಸ್ಟ್‌ ಮಾಡಿ

    0 ಕಾಮೆಂಟ್‌ಗಳು
    * Please Don't Spam Here. All the Comments are Reviewed by Admin.

    Top Post Ad

    Click to join Samarasasudhi Official Whatsapp Group

    Qries

    Qries

    Below Post Ad


    ಜಾಹಿರಾತು














    Qries