HEALTH TIPS

ಮುಂಬೈ ಗಣಪತಿಗೆ ₹360 ಕೋಟಿ ವಿಮೆ!

               ಮುಂಬೈ: ದೇಶದ ಶ್ರೀಮಂತ ಗಣಪತಿ ಮಂಡಲ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮುಂಬೈನ ಜಿಎಸ್‌ಬಿ ಸೇವಾ ಮಂಡಲದ ಮಹಾ ಗಣೇಶನಿಗೆ ಈ ಬಾರಿ ₹ 360.40 ಕೋಟಿ ವಿಮೆ ಮಾಡಿಸಲಾಗಿದೆ.

               ಮುಂಬೈನ ಕಿಂಗ್‌ ಸರ್ಕಲ್‌ನಲ್ಲಿ ಈ ಗಣೇಶ ಮಂಡಲವಿದ್ದು, ಜನಸಾಮಾನ್ಯರು ಸೇರಿದಂತೆ ಖ್ಯಾತನಾಮರು ಇಲ್ಲಿಗೆ ಭೇಟಿ ನೀಡುತ್ತಾರೆ.

                   ಈ ಬಾರಿ 69ನೇ ಸಾರ್ವಜನಿಕ ಗಣೇಶೋತ್ಸವಕ್ಕೆ ಸಮಿತಿಯಿಂದ ಭರದ ಸಿದ್ಧತೆ ನಡೆದಿದೆ.

ಕಳೆದ ವರ್ಷ ಜಿಎಸ್‌ಬಿ ಮಂಡಲವು ₹ 316.40 ಕೋಟಿ ವಿಮೆ ಮಾಡಿಸಿತ್ತು. ಈ ಬಾರಿ ವಿಮಾ ಮೊತ್ತವು ₹ 44 ಕೋಟಿ ಹೆಚ್ಚಾಗಿದೆ. ಆದಾಗ್ಯೂ, ಎಷ್ಟು ಪ್ರೀಮಿಯಂ ಪಾವತಿಸಲಾಗಿದೆ ಎಂಬ ಬಗ್ಗೆ ಅಧಿಕೃತವಾಗಿ ಘೋಷಿಸಿಲ್ಲ. ವಿಮಾ ಮೊತ್ತದ ಬಗ್ಗೆಯಷ್ಟೇ ಟ್ರಸ್ಟಿ ಹಾಗೂ ವಕ್ತಾರ ಅಮಿತ್‌ ಡಿ. ಪೈ ಮಾಹಿತಿ ನೀಡಿದ್ದಾರೆ.

                   ಗಣೇಶನಿಗೆ ತೊಡಿಸುವ ಚಿನ್ನ ಮತ್ತು ಬೆಳ್ಳಿಯ ಆಭರಣಗಳಿಗೆ ₹ 38.47 ಕೋಟಿ, ಉತ್ಸವದ ವೇಳೆ ಸಂಭವಿಸುವ ಅನಾಹುತಗಳಿಗೆ ಪರಿಹಾರವಾಗಿ ₹ 2 ಕೋಟಿ ವಿಮೆ ಮಾಡಿಸಲಾಗಿದೆ. ಇದರಲ್ಲಿ ಭೂಕಂಪ ಹಾಗೂ ಅಗ್ನಿ ಅವಘಡದಿಂದಾಗುವ ಹಾನಿಯು ಒಳಗೊಂಡಿದೆ.

                 ಸಾರ್ವಜನಿಕ ಹೊಣೆಗಾರಿಕೆಯಡಿ ಮೂರ್ತಿ ಪ್ರತಿಷ್ಠಾಪಿಸುವ ಪೆಂಡಾಲ್‌, ಕ್ರೀಡಾಂಗಣ ಹಾಗೂ ಭಕ್ತರಿಗಾಗಿ ₹ 30 ಕೋಟಿ ವಿಮೆ ಮಾಡಿಸಲಾಗಿದೆ. ಉಳಿದಂತೆ ಸ್ವಯಂ ಸೇವಕರು, ಅರ್ಚಕರು, ಅಡುಗೆ ಸಿಬ್ಬಂದಿ, ಪಾದರಕ್ಷೆ ಕಾಯುವ ಸಿಬ್ಬಂದಿ, ರಕ್ಷಣಾ ಸಿಬ್ಬಂದಿಗಾಗಿ ₹ 289.50 ಕೋಟಿ ವಿಮೆ ಮಾಡಿಸಲಾಗಿದೆ. ಮೂರ್ತಿ ಪ್ರತಿಷ್ಠಾ‍ಪನಾ ಸ್ಥಳದಲ್ಲಿ ಸಂಭವಿಸುವ ಅಗ್ನಿ ಅವಘಡಗಳಿಗೆ ₹ 43 ಕೋಟಿ ವಿಮೆ ಮಾಡಿಸಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries