ಮುಂಬೈ,: ಆನ್‌ಲೈನ್ ಪಾವತಿಗಾಗಿ ಬಿಲ್ಲಿಂಗ್ ಡೆಸ್ಕ್‌ನಲ್ಲಿ ಇರಿಸಿದ್ದ ಕ್ಯೂಆರ್ ಕೋಡ್ ದುರುಪಯೋಗ ಮಾಡಿಕೊಂಡು ಮಾಡಿಕೊಂಡು ₹48 ಲಕ್ಷ ಲಪಾಟಿಸಿದ ಆರೋಪದ ಮೇಲೆ ಮುಂಬೈ ವಿಮಾನ ನಿಲ್ದಾಣದ ಸ್ಪಾ ವ್ಯವಸ್ಥಾಪಕರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಆರೋಪಿಯು ಕ್ಯೂಆರ್ ಕೋಡ್ ಅನ್ನು ತನ್ನ ಬ್ಯಾಂಕ್ ಖಾತೆಗೆ ಲಿಂಕ್ ಮಾಡಿಕೊಂಡು ಹಣ ಲಪಟಾಯಿಸಿದ್ದಾನೆ ಎಂದು ಆರೋಪಿಸಲಾಗಿದೆ.
ವಂಚನೆ ಸುಳಿವು ಸಿಕ್ಕ ಬಳಿಕ ಸ್ಪಾ ಕಂಪನಿಯ ಹಿರಿಯ ಅಧಿಕಾರಿಯೊಬ್ಬರು ಲೆಕ್ಕ ಪರಿಶೋದನೆ ನಡೆಸಿದ್ದು, ವಿಷಯ ಬೆಳಕಿಗೆ ಬಂದಿದೆ. ನಂತರ, ಆರೋಪಿಯನ್ನು ಕೆಲಸದಿಂದ ತೆಗೆದುಹಾಕಲಾಗಿದ್ದು, ವಿಮಾನ ನಿಲ್ದಾಣಕ್ಕೆ ಪ್ರವೇಶಕ್ಕಾಗಿ ಅವರಿಗೆ ನೀಡಲಾಗಿದ್ದ ಕಾರ್ಡ್ ಅನ್ನು ಹಿಂಪಡೆಯಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಕಂಪನಿಯ ಅಧಿಕಾರಿಯ ದೂರಿನ ಆಧಾರದ ಮೇಲೆ ಆರೋಪಿಯ ವಿರುದ್ಧ ಸೆಕ್ಷನ್ 420 (ವಂಚನೆ ಮತ್ತು ಅಪ್ರಾಮಾಣಿಕತೆ) ಸೇರಿದಂತೆ ಭಾರತೀಯ ದಂಡ ಸಂಹಿತೆಯ ಸಂಬಂಧಿತ ವಿವಿಧ ಸೆಕ್ಷನ್‌ಗಳ ಅಡಿ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.