ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 71 ಹೊಸ ಕೋವಿಡ್ -19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಪಾಸಿಟಿವ್ ಪ್ರಕರಣಗಳ ಸಂಖ್ಯೆ 494 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇಂದು ಬೆಳಗ್ಗೆ 8 ಗಂಟೆಗೆ ನವೀಕರಿಸಿದ ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 4.49 ಕೋಟಿ(4,49,97,537)ಗೆ ತಲುಪಿದೆ ಮತ್ತು ಕೋವಿಡ್ ಸಾವಿನ ಸಂಖ್ಯೆ 5,32,024 ಇದೆ.
ಆರೋಗ್ಯ ಸಚಿವಾಲಯದ ವೆಬ್‌ಸೈಟ್ ಪ್ರಕಾರ, ಕೋವಿಡ್ ನಿಂದ ಚೇತರಿಸಿಕೊಂಡರ ಸಂಖ್ಯೆ 4,44,65,019 ಕ್ಕೆ ಏರಿದೆ ಮತ್ತು ರಾಷ್ಟ್ರೀಯ ಚೇತರಿಕೆಯ ಪ್ರಮಾಣವು ಶೇಕಡಾ 98.81 ರಷ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ವೆಬ್‌ಸೈಟ್ ಪ್ರಕಾರ, ದೇಶದಲ್ಲಿ ಇದುವರೆಗೆ 220.67 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.