ನೆಲ್ಲಿಕಾಯಿ ಜ್ಯೂಸ್ ಆರೋಗ್ಯಕ್ಕೆ ಒಳ್ಳೆಯದು, ಅದರಲ್ಲೂ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಈ ಪ್ರಮುಖ ಪ್ರಯೋಜನಗಳನ್ನು ಪಡೆಯಬಹುದು ನೋಡಿ:
ನೆಲ್ಲಿಕಾಯಿ ಜ್ಯೂಸ್‌ನಲ್ಲಿ ವಿಟಮಿನ್ ಸಿ ಇದೆ ವಿಟಮಿನ್ ಸಿ ರೋಗ ನಿರೋಧಕ ಶಕ್ತಿ ಹೆಚ್ಚಾಗಲು ತುಂಬಾನೇ ಪರಿಣಾಮಕಾರಿ. ಇದನ್ನು ನೀವು ಸೇವಿಸಲಾರಂಭಿಸಿದರೆ ಕಾಯಿಲೆ ಬೀಳುವುದು ಕಡಿಮೆಯಾಗುವುದು.
ಉರಿಯೂತ ಕಡಿಮೆ ಮಾಡುತ್ತದೆ :
ಉರಿಯೂತದ ಸಮಸ್ಯೆ ಇರುವವರು ನೆಲ್ಲಿಕಾಯಿ ಜ್ಯೂಸ್ ಕುಡಿದರೆ ಉರಿಯೂತದ ಲಕ್ಷಣಗಳು ಕಡಿಮೆಯಾಗುವುದು. ಇದು ಊತ ಹಾಗೂ ನೋವು ಕಡಿಮೆ ಮಾಡುತ್ತದೆ.
ಜೀರ್ಣಕ್ರಿಯೆಗೆ ತುಂಬಾನೇ ಒಳ್ಳೆಯದು :ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಜೀರ್ಣಕ್ರಿಯೆ ತುಂಬಾ ಚೆನ್ನಾಗಿ ನಡೆಯುತ್ತದೆ. ಇದರಿಂದ ದೇಹವು ನಾವು ತಿಂದ ಆಹಾರದಿಂದ ಪೋಷಕಾಂಶವನ್ನು ಹೀರಿಕೊಳ್ಳುವ ಕಾರ್ಯವನ್ನು ಉತ್ತಮವಾಗಿ ನಿರ್ವಹಿಸುತ್ತದೆ.
ಚಯಪಚಯ ಕ್ರಿಯೆ ಉತ್ತಮವಾಗಿಸಿ ತೂಕ ನಿಯಂತ್ರಿಸುತ್ತದೆ :
ಚಯಪಚಯ ಕ್ರಿಯೆ ಚೆನ್ನಾಗಿ ನಡೆಯುತ್ತಿದ್ದರೆ ತೂಕ ನಿಯಂತ್ರಣದಲ್ಲಿ ಇರುತ್ತದೆ. ತೂಕವನ್ನು ನಿಯಂತ್ರಿಸುವಲ್ಲಿ ಹಾಗೂ ಒಟ್ಟುಮೊತ್ತ ಆರೋಗ್ಯವನ್ನು ಕಾಪಾಡಲು ಇದು ಸಹಾಯ ಮಾಡುತ್ತದೆ. ದೇಹದಲ್ಲಿ ಸಕ್ಕರೆಯಂಶ ನಿಯಂತ್ರಣದಲ್ಲಿಡಲು ಸಹಕಾರಿ :ನೆಲ್ಲಿಕಾಯಿ ಜ್ಯೂಸ್ ಕುಡಿದರೆ ರಕ್ತದಲ್ಲಿ ಸಕ್ಕರೆಯಂಶ ನಿಯಂತ್ರಣದಲ್ಲಿರುತ್ತದೆ, ಇದರಿಂದ ಮಧುಮೇಹವನ್ನು ನಿಯಂತ್ರಿಸಬಹುದು.
ಹೃದಯ ಆರೋಗ್ಯಕ್ಕೆ ಒಳ್ಳೆಯದು :ಕೊಲೆಸ್ಟ್ರಾಲ್ ಹೆಚ್ಚಾದರೆ ಹೃದಯಾಘಾತದ ಸಮಸ್ಯೆ ಹೆಚ್ಚಾಗುವುದು, ಕೊಲೆಸ್ಟ್ರಾಲ್ ನಿಯಂತ್ರಿಸುವ ಕೆಲಸವನ್ನು ನೆಲ್ಲಿಕಾಯಿ ಜ್ಯೂಸ್ ಮಾಡುತ್ತದೆ, ಇದರಿಂದ ಹೃದಯದ ಆರೋಗ್ಯಕ್ಕೆ ಒಳ್ಳೆಯದು.
ದೇಹವನ್ನು ಡಿಟಾಕ್ಸ್ ಮಾಡುತ್ತದೆ :
ದೇಹದಲ್ಲಿ ಕಶ್ಮಲಗಳು ಹೆಚ್ಚಾದರೆ ಇದರಿಂದ ರಕ್ತ ಮಲೀನವಾಗಿ ಕಾಯಿಲೆಗಳು ಬರುವುದು, ನೆಲ್ಲಿಕಾಯಿ ಜ್ಯೂಸ್ ದೇಹದಲ್ಲಿರುವ ಕಶ್ಮಲಗಳನ್ನು ಹೊರಹಾಕಿ ದೇಹವನ್ನು ಡಿಟಾಕ್ಸ್ ಮಾಡುತ್ತದೆ.
ಮಾನಸಿಕ ಒತ್ತಡ ಕಡಿಮೆ ಮಾಡುತ್ತದೆ
ಮಾನಸಿಕ ಒತ್ತಡ ಎಂಬುವುದು ಪ್ರತಿಯೊಬ್ಬರಲ್ಲೂ ಇರುತ್ತದೆ, ಇದನ್ನು ಕಡಿಮೆ ಮಾಡದಿದ್ದರೆ ಆರೋಗ್ಯಕ್ಕೆ ಅಪಾಯ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಮಾನಸಿಕ ಒತ್ತಡ ಹೆಚ್ಚಿಸುವ ಹಾರ್ಮೋನ್‌ಗಳನ್ನು ನಿಯಂತ್ರಿಸಿ ಮಾನಸಿಕ ಒತ್ತಡ ಕಡಿಮೆ ಮಾಡುತ್ತದೆ.
ಸೌಂದರ್ಯ ವೃದ್ಧಿಸುತ್ತದೆ
ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಕೂದಲಿನ ಆರೋಗ್ಯಕ್ಕೆ ಒಳ್ಳೆಯದು, ತ್ವಚೆಯ ಹೊಳಪು ಹೆಚ್ಚಾಗುವುದು. ಆದ್ದರಿಂದ ಸೌಂದರ್ಯವರ್ಧನೆಗೆ ಕೂಡ ಇದು ಸಹಕಾರಿಯಾಗಿದೆ.
ನೆಲ್ಲಿಕಾಯಿ ಜ್ಯೂಸ್ ಮಾಡುವುದು ಹೇಗೆ?
5-6 ನೆಲ್ಲಿಕಾಯಿ
ಶುಂಠಿ
ಜೇನು
ನೀರು
ನೆಲ್ಲಿಕಾಯಿ ಬೀಜ ತೆಗೆದು ಜ್ಯೂಸ್ ಮಾಡಿ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ.
ಹೊರಗಡೆ ಸಿಗುವ ಆಮ್ಲ ಜ್ಯೂಸ್‌ಗಿಂತ ನೀವೇ ನೆಲ್ಲಿಕಾಯಿ ಜ್ಯೂಸ್ ಮಾಡಿ ಕುಡಿಯಿರಿ.
ಜೇನು, ಶುಂಠಿ, ನೆಲ್ಲಿಕಾಯಿ, ಶುಂಠಿ ಎಲ್ಲವೂ ಆರೋಗ್ಯಕ್ಕೆ ಒಳ್ಳೆಯದು, ಶುಂಠಿ ಸ್ವಲ್ಪ ಕಡಿಮೆ ಹಾಕಿ. ಹೀಗೆ ಮಾಡಿ ಕುಡಿಯುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು.