ನವದೆಹಲಿ: 2014ರಿಂದ ಇದುವರೆಗೆ ಎನ್‌ಡಿಎ ಆಡಳಿತದಲ್ಲಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಿಗೆ ಒಂಬತ್ತು ಲಕ್ಷಕ್ಕೂ ಅಧಿಕ ಮಂದಿಯನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಮಂಗಳವಾರ ತಿಳಿಸಿದ್ದಾರೆ.
ನವದೆಹಲಿ: 2014ರಿಂದ ಇದುವರೆಗೆ ಎನ್‌ಡಿಎ ಆಡಳಿತದಲ್ಲಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಿಗೆ ಒಂಬತ್ತು ಲಕ್ಷಕ್ಕೂ ಅಧಿಕ ಮಂದಿಯನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಮಂಗಳವಾರ ತಿಳಿಸಿದ್ದಾರೆ.
ಯುಪಿಎ ಸರ್ಕಾರದ ಮೊದಲ ಒಂಬತ್ತು ವರ್ಷಗಳ ಅವಧಿಯಲ್ಲಿ ಆರು ಲಕ್ಷ ಮಂದಿಗಷ್ಟೆ ಉದ್ಯೋಗ ನೀಡಲಾಗಿತ್ತು ಎಂದು ಅವರು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ 'ರೋಜ್‌ಗಾರ್ ಮೇಳ'ದಲ್ಲಿ ಮಾತನಾಡಿದ ಅವರು, ಕಳೆದ ಒಂಬತ್ತು ವರ್ಷಗಳಲ್ಲಿ ಕೇವಲ ಉದ್ಯೋಗಗಳನ್ನಷ್ಟೇ ಸೃಷ್ಟಿಸಿಲ್ಲ. ಉದ್ಯೋಗವೆಂದರೆ ಸರ್ಕಾರಿ ಕೆಲಸ ಮಾತ್ರವಲ್ಲ ಎಂಬ ಜಾಗೃತಿಯನ್ನೂ ಯುವಜನತೆಯಲ್ಲಿ ಮೋದಿ ಅವರು ಮೂಡಿಸಿದ್ದಾರೆ ಎಂದರು.
ನವೋದ್ಯಮಗಳ ಸಂಖ್ಯೆ 400ರಿಂದ 1.25 ಲಕ್ಷಕ್ಕೆ ಏರಿಕೆಯಾಗಿದೆ ಎಂದಿದ್ದಾರೆ.
ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಿಗೆ ಆಯ್ಕೆಯಾಗಿರುವ 51 ಸಾವಿರಕ್ಕೂ ಹೆಚ್ಚು ಮಂದಿಗೆ ವರ್ಚುವಲ್ ಆಗಿ ನೇಮಕಾತಿ ಪತ್ರಗಳನ್ನು ವಿತರಿಸಲಾಯಿತು.