ಕುಂಬಳೆ : ಪೆÇಲೀಸರನ್ನು ಕಂಡು ಪರಾರಿಯಾಗುವ ಯತ್ನದಲ್ಲಿದ್ದ ಕಾರು ಪಲ್ಟಿಯಾಗಿ ಬಾಲಕ ಮೃತಪಟ್ಟ ಪ್ರಕರಣದಲ್ಲಿ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಐಕ್ಯರಂಗ ಪುತ್ತಿಗೆ ಮಂಡಲ ಸಮಿತಿ ವತಿಯಿಂದ ಸೋಮವಾರ ಕುಂಬಳೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.
ಠಾಣೆ ಎಸ್.ಐ ಸೇರಿದಂತೆ ಮೂವರು ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಘಟನೆಗೆ ಕಾರಣರಾದ ಪೊಲಿಸರ ವಿರುದ್ಧ ಕೊಲೆ ಕೃತ್ಯಕ್ಕೆ ಸಂಬಂಧಿಸಿ ಕೇಸು ದಾಖಲಿಸುವಂತೆ ಆಗ್ರಹಿಸಿ ಪೊಲೀಸ್ ಠಾಣೆ ಮುತ್ತಿಗೆ ನಡೆಸಲಾಯಿತು. ಪ್ರತಿಭಟನಾಕಾರರು ಪೊಲೀಸ್ ತಡೆಬೇಲಿ ಭೇದಿಸಿ ಮುನ್ನುಗ್ಗಲು ಯತ್ನಿಸಿದಾಗ ಪೊಲೀಸರು ಜಲಫಿರಂಗಿ ಪ್ರಯೋಗಿಸಿ ಪ್ರತಿಭಟನಾಕಾರರನ್ನು ಚದುರಿಸಿದರು. ಡಿಸಿಸಿ ಅಧ್ಯಕ್ಷ ಪಿ.ಕೆ ಫೈಸಲ್ ಧರಣಿ ಉದ್ಘಾಟಿಸಿದರು. ಐಕ್ಯರಂಗ ಜಿಲ್ಲಾ ಹಾಗೂ ಮಂಡಲ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.