HEALTH TIPS

ಪ್ರಮಾಣಪತ್ರಗಳ ಮೇಲೆ ವಿದ್ಯಾರ್ಥಿಗಳ ಆಧಾರ್ ಕಾರ್ಡ್ ಸಂಖ್ಯೆ ಮುದ್ರಿಸಬೇಡಿ: ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿದ ಯುಜಿಸಿ

               ವದೆಹಲಿ: ಆಧಾರ್ ಕಾರ್ಡ್‌ಗೆ ಸಂಬಂಧಿಸಿದಂತೆ ಯುಜಿಸಿ ಮಹತ್ವದ ಮಾಹಿತಿಯನ್ನು ನೀಡಿದೆ. ವಿದ್ಯಾರ್ಥಿಗಳಿಗೆ ನೀಡುವ ಪದವಿ ಮತ್ತು ತಾತ್ಕಲಿಕ ಪ್ರಮಾಣಪತ್ರಗಳ ಮೇಲೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಮುದ್ರಿಸದಂತೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಎಲ್ಲಾ ವಿಶ್ವವಿದ್ಯಾಲಯಗಳಿಗೆ ನಿರ್ದೇಶನ ನೀಡಿದೆ.

           ವಿದ್ಯಾರ್ಥಿಗಳ ಖಾಸಗಿ ಡೇಟಾಬೇಸ್‌ಗಳನ್ನು ಸಾರ್ವಜನಿಕಗೊಳಿಸುವುದು ಸ್ವೀಕಾರಾರ್ಹವಲ್ಲ. ಎಲ್ಲಾ ವಿಶ್ವವಿದ್ಯಾಲಯಗಳು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ನಿಯಮಗಳನ್ನು ಅನುಸರಿಸಬೇಕು ಎಂದು ಯುಜಿಸಿ ಹೇಳಿದೆ. ಈ ನಿಟ್ಟಿನಲ್ಲಿ ಯುಜಿಸಿ ಅಧಿಕೃತ ವೆಬ್‌ಸೈಟ್ https://www.ugc.gov.in/ ನಲ್ಲಿಯೂ ಸೂಚನೆ ನೀಡಿದೆ. ಹೆಚ್ಚಿನ ಮಾಹಿತಿಗಾಗಿ ಪೋರ್ಟಲ್‌ಗೆ ಭೇಟಿ ನೀಡುವ ಮೂಲಕ ಅಧಿಸೂಚನೆಯನ್ನು ಪರಿಶೀಲಿಸಬಹುದು.

                   ವಿದ್ಯಾರ್ಥಿಗಳ ಮಾಹಿತಿಯ ದುರ್ಬಳಕೆಯನ್ನು ತಪ್ಪಿಸಲು ಅಧಿಕಾರಿಗಳು ಆಧಾರ್ ಕಾರ್ಡ್ ಸಂಖ್ಯೆಯನ್ನು ಬರೆಯುವ ಬದಲು ಅದರ ಕೆಲವು ಅಂಕೆಗಳನ್ನು ಬರೆಯಬಹುದಾಗಿದ್ದು, ಎಲ್ಲಾ HEI ಗಳು UGC ಮಾರ್ಗಸೂಚಿಗಳಿಗೆ ಬದ್ಧವಾಗಿರಬೇಕಿದೆ.

             2017 ರಲ್ಲಿ, ಏಕರೂಪತೆ ಮತ್ತು ಪಾರದರ್ಶಕತೆಯನ್ನು ತರಲು ಯುಜಿಸಿ ವಿಶ್ವವಿದ್ಯಾಲಯಗಳು ನೀಡುವ ಪದವಿಗಳು ಮತ್ತು ಪ್ರಶಸ್ತಿ ಪ್ರಮಾಣಪತ್ರಗಳಲ್ಲಿ ಆಧಾರ್ ಸಂಖ್ಯೆ ಮತ್ತು ವಿದ್ಯಾರ್ಥಿಗಳ ಚಿತ್ರಗಳನ್ನು ಅಳವಡಿಸಬೇಕೆಂದು ವಿನಂತಿಸಿತ್ತು.

               ಶೀಘ್ರದಲ್ಲೇ ಯುಜಿಸಿ NET 2023 ರ ಅಧಿಸೂಚನೆಯನ್ನು ಹೊರಡಿಸಲಾಗುವುದು. ಇದಾದ ನಂತರ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. ಈ ತಿಂಗಳ ಅಂತ್ಯದ ವೇಳೆಗೆ ಪರೀಕ್ಷೆಯ ಅಧಿಸೂಚನೆ ಹೊರಬೀಳಬಹುದು ಎಂದು ಮಾಧ್ಯಮ ವರದಿಗಳಲ್ಲಿ ಹೇಳಲಾಗುತ್ತಿದೆ. ಈ ಬಗ್ಗೆ ಇದುವರೆಗೆ ಯಾವುದೇ ಅಧಿಕೃತ ಮಾಹಿತಿಯನ್ನು ನೀಡಲಾಗಿಲ್ಲ, ಆದ್ದರಿಂದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.ugc.gov.in/ ಗೆ ಭೇಟಿ ನೀಡುವಂತೆ ಸೂಚಿಸಲಾಗಿದೆ.

ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಈ ನೇರ ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಓದಲು ಈ ನೇರ ಲಿಂಕ್ ಕ್ಲಿಕ್ ಮಾಡಿ


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries