ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ಇಂದು (ಸೆಪ್ಟೆಂಬರ್ 13) ಬೆಂಗಳೂರಿನಲ್ಲಿ ಒಂದು ದಿನದ ದಕ್ಷಿಣ ರಾಜ್ಯಗಳ ಡಿಜಿಪಿ ಸಮಾವೇಶವನ್ನು ಆಯೋಜಿಸಲಾಗಿದೆ.
ಈ ಸಮಾವೇಶದಲ್ಲಿ ದಕ್ಷಿಣ ರಾಜ್ಯಗಳ ಎಲ್ಲಾ ಪೊಲೀಸ್ ಮಹಾನಿರ್ದೇಶಕರು ಹಾಗೂ ಕೇಂದ್ರ ಪೊಲೀಸ್ ಸಂಸ್ಥೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಈ ಸಮಾವೇಶವು ದಕ್ಷಿಣ ಭಾರತದ ವಿವಿಧ ಪೊಲೀಸ್ ಪಡೆಗಳ ನಡುವಿನ ಪ್ರಾದೇಶಿಕ ಸಮನ್ವಯದಲ್ಲಿ ಪ್ರಮುಖ ಮೈಲಿಗಲ್ಲು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಗೃಹ ಸಚಿವ ಜಿ ಪರಮೇಶ್ವರ ಅವರ ಸಮ್ಮುಖದಲ್ಲಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 'ದಕ್ಷಿಣ ಭಾರತ ಡಿಜಿಪಿಗಳ ಸಮನ್ವಯ ಸಮಾವೇಶ'ವನ್ನು ಉದ್ಘಾಟಿಸಲಿದ್ದಾರೆ. ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಕೇರಳ, ಪುದುಚೇರಿ, ಅಂಡಮಾನ್ ಮತ್ತು ನಿಕೋಬಾರ್ ಮತ್ತು ಲಕ್ಷದ್ವೀಪ ದ್ವೀಪಗಳ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಪಡೆಗಳ ಮುಖ್ಯಸ್ಥರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.